ಪ್ರಥಮ ದರ್ಜೆ ಕ್ರಿಕೆಟ್ಟಿಗೆ ವಿಕೆಟ್ ಕೀಪರ್ ಸಾಬಾ ಕರೀಂ ವಿದಾಯ
ಕೋಲ್ಕತಾ : ಜಿಂಬಾಬ್ವೆ ಪ್ರವಾಸ ಕೈಗೊಳ್ಳುವ ಭಾರತ ತಂಡವನ್ನು ಪ್ರಕಟಿಸಿದ ಮರುದಿನವೇ, ಬಂಗಾಳ ಕ್ರಿಕೆಟ್ ತಂಡದ ನಾಯಕ ಹಾಗೂ ಭಾರತೀಯ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಸಾಬಾ ಕರೀಂ ಪ್ರಥಮ ದರ್ಜೆ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ಪ್ರಥಮ ದರ್ಜೆ ಕ್ರಿಕ್ಟೆಟಿನಿಂದ ನಿವೃತ್ತನಾಗುತ್ತಿದ್ದೇನೆ. ಕಣ್ಣಿನ ತೊಂದರೆ ತುಂಬಾ ಬಾಧೆ ಕೊಡುತ್ತಿದೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕರೀಂ ಹೇಳಿದರು. ಕಳೆದ ಏಷ್ಯಾ ಕಪ್ ಕ್ರಿಕೆಟ್ ಸಂದರ್ಭದಲ್ಲಿ ಅವರು ಗಾಯಗೊಂಡಿದ್ದರು. ಅನಿಲ್ ಕುಂಬ್ಳೆ ಬೌಲಿಂಗ್ನಲ್ಲಿ ಚಿಮ್ಮಿ ಬಂದ ಚೆಂಡು ಕರೀಂ ಅವರ ಬಲಗಣ್ಣನ್ನು ಗಾಯಗೊಳಿಸಿತ್ತು . ಆನಂತರ ಕೆಲವು ಪಂದ್ಯಗಳನ್ನು ಆಡಿದರೂ, ಅಂತರರಾಷ್ಟ್ರೀಯ ಪಂದ್ಯದ ಒತ್ತಡಕ್ಕೆ ಒಗ್ಗಿಕೊಳ್ಳುವುದು ಕಷ್ಟಸಾಧ್ಯವಾದ್ದರಿಂದ ನಿವೃತ್ತಿ ಘೋಷಿಸುತ್ತಿರುವುದಾಗಿ ಅವರು ಹೇಳಿದರು.
35 ಸೀಮಿತ ಓವರ್ಗಳ ಪಂದ್ಯ ಹಾಗೂ ಒಂದು ಟೆಸ್ಟ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕರೀಂ, ಇನ್ನು ಮುಂದೆ ಕೋಚ್ ಹಾಗೂ ವೀಕ್ಷಕ ವಿವರಣೆಕಾರನಾಗಲು ಬಯಸುವುದಾಗಿ ತಿಳಿಸಿದರು. ಪ್ರಸ್ತುತ ಟಾಟಾ ಸ್ಟೀಲ್ ಕಂಪನಿಯಲ್ಲಿ ಅಧಿಕಾರಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.
(ಯುಎನ್ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications