2004 ರ ಹೊತ್ತಿಗೆ ದೇವನಹಳ್ಳಿಗೆ ವಿಮಾನಗಳುಬಂದಿಳಿಯಲಿವೆ
ಬೆಂಗಳೂರು : ಒಂಭತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿ ಬರುವ ಫೆಬ್ರವರಿಯಿಂದ ಪ್ರಾರಂಭವಾಗಲಿದ್ದು , ಡಿಸೆಂಬರ್ 2004 ರ ವೇಳೆಗೆ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ದೇವನಹಳ್ಳಿ ಸಮೀಪದ ಅರಿಶಿನಕುಂಟೆ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಕೃಷ್ಣ , ವಿಮಾನ ನಿಲ್ದಾಣ ಕಾಮಗಾರಿಗೆ ಗೊತ್ತು ಪಡಿಸಿರುವ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ವೀರಪ್ಪ ಮೊಯಿಲಿ ಅವರ ಕಾಲದಲ್ಲಿಯೇ ವಿಮಾನ ನಿಲ್ದಾಣದ ಯೋಜನೆ ಸಿದ್ಧವಾಗಿತ್ತಾದರೂ, ಆನಂತರದ ಸರ್ಕಾರಗಳು ತೋರಿಸಿದ ಅನಾಸಕ್ತಿಯಿಂದಾಗಿ ಯೋಜನೆ ನೆನೆಗುದಿಗೆ ಬಿತ್ತೆಂದು ಅವರು ವಿಷಾದಿಸಿದರು.
ಖಾಸಗಿ ಪಾಲುದಾರರ ಜಂಟಿ ಸಹಯೋಗದಲ್ಲಿ ನಿರ್ಮಾಣವಾಗುವ ವಿಮಾನ ನಿಲ್ದಾಣ ಕಾಮಗಾರಿಗೆ 1300 ಕೋಟಿ ರುಪಾಯಿ ಖರ್ಚಾಗಲಿದೆ. ನಿರ್ಮಾಣ ವೆಚ್ಚದಲ್ಲಿ ಪ್ರತಿಶತ 13 ರಷ್ಟನ್ನು ರಾಜ್ಯ ಸರ್ಕಾರ ಹಾಗೂ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಭರಿಸಲಿದ್ದು , ಉಳಿದ ಶೇ.77 ರಷ್ಟು ಹಣವನ್ನು ಪಾಲುದಾರರಿಂದ ಸಂಗ್ರಹಿಸಲಾಗುವುದು. ಕಾಮಗಾರಿಯನ್ನು ವಹಿಸಿಕೊಳ್ಳಲು ಈಗಾಗಲೇ 12 ಕಂಪನಿಗಳು ಟೆಂಡರ್ ಸಲ್ಲಿಸಿವೆ. ಸೂಕ್ತವಾದವರಿಗೆ ಕಾಮಗಾರಿ ವಹಿಸಿಕೊಡಲಾಗುವುದು ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications