ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಾಗಿದೆ !
ಬೆಂಗಳೂರು : ದೇವನಹಳ್ಳಿ ಬಳಿ ತಲೆ ಎತ್ತಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಾಮಗಾರಿಯೇ ಇನ್ನೂ ಆರಂಭವೇ ಆಗಿಲ್ಲ. ಆದರೆ, ಮುಖ್ಯಮಂತ್ರಿ ಕೃಷ್ಣ 2004ರ ಡಿಸೆಂಬರ್ ಹೊತ್ತಿಗೆ ಇಲ್ಲಿ ವಿಮಾನ ಹಾರಾಡಲಿದೆ ಎಂದಿದ್ದಾರೆ. ಈ ಮಧ್ಯೆ ಈ ನಿಲ್ದಾಣಕ್ಕೆ ಯಾವ? ಯಾರ ಹೆಸರಿಡಬೇಕು ಎಂಬುದೇ ದೊಡ್ಡ ವಿವಾದವಾಗಿ ಪರಿಣಮಿಸುತ್ತಿದೆ.
ಕ್ರಾಂತಿಕಾರಿ ಬಸವಣ್ಣ, ಆದಿ ಶಂಕರಾಚಾರ್ಯ, ಡಾ. ಅಂಬೇಡ್ಕರ್, ರಾಜೀವ್ ಗಾಂಧೀ, ಇಂದಿರಾಗಾಂಧಿ ಅವರ ಹೆಸರು ಕೇಳಿಬರುತ್ತಿದ್ದರೆ, ಒಂದು ಹೆಜ್ಜೆ ಮುಂದೆ ಹೋಗಿರುವ ಕೆಂಪೇಗೌಡ ನಾಗರಿಕ ಸಮಿತಿ ಈ ವಿಮಾನ ನಿಲ್ದಾಣಕ್ಕೆ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣವನ್ನೇ ಮಾಡಿಬಿಟ್ಟಿದೆ.
ಯಲಹಂಕದ ಮುಖ್ಯ ವೃತ್ತದಲ್ಲಿರುವ ಎತ್ತರದ ಹೊನಲು ಬೆಳಕಿನ ಕಂಬದ ಪಕ್ಕದಲ್ಲಿ ಬೃಹತ್ ಗಾತ್ರದ ಫಲಕವನ್ನೂ ಹಾಕಿಬಿಟ್ಟಿದೆ. , ಫಲಕದಲ್ಲಿ ವಿಮಾನದ ಚಿತ್ರ, ಸುಸ್ವಾಗತ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಬೆಂಗಳೂರು ಉತ್ತರ ಎಂದು ದಪ್ಪಕ್ಷರದಲ್ಲಿ ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬರೆಯಲಾಗಿದೆ. ಈ ಫಲಕದ ಕೆಳಭಾಗದಲ್ಲಿ ಸಮಿತಿಯ ಕಾರ್ಯದರ್ಶಿ ಕೆ.ವಿ. ನಂಜುಂಡಪ್ಪ, ಉಪಾಧ್ಯಕ್ಷರಾದ ನಾಗರಾಜ್, ಅಧ್ಯಕ್ಷ ದೊಡ್ಡ ಬಸವರಾಜು ಅವರ ಹೆಸರುಗಳೂ ಇವೆ.
ಸರಕಾರಕ್ಕೆ ಬಿಸಿತುಪ್ಪ : ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರು ಎಂಬಂತೆ ಇನ್ನೂ ನಿಲ್ದಾಣ ಕಾಮಗಾರಿಯೇ ಆರಂಭವಾಗದಿರುವಾಗ ವಿಮಾನ ನಿಲ್ದಾಣಕ್ಕೆ ಹೆಸರಿಡುವುದು ಹೇಗೆ? ಅದಕ್ಕೆ ಇದು ಸೂಕ್ತ ಕಾಲವಲ್ಲ ಎಂಬುದು ರಾಜ್ಯ ಸರಕಾರದ ಅಧಿಕಾರಿಗಳ ಅನಿಸಿಕೆ. ಆದರೆ, ಕೆಂಪೇಗೌಡ ಸಮಿತಿ ಈಗಾಗಲೇ ನಾಮಕರಣ ಮಾಡಿ, ಫಲಕವನ್ನೂ ಹಾಕಿದೆ.
ಈ ಫಲಕ ತೆಗೆದರೆ ಸರಕಾರ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತೆ ಆಗುತ್ತದೆ. ಒಕ್ಕಲಿಗರ ಆಕ್ರೋಶಕ್ಕೂ ಒಳಗಾಗಬೇಕಾದ ಪರಿಸ್ಥಿತಿ ಬರುತ್ತದೆ. ತೆಗೆಯದಿದ್ದರೆ, ಬಸವಣ್ಣ ಹಾಗೂ ಅಂಬೇಡ್ಕರ್ ಹೆಸರಿಡುವಂತೆ ಒತ್ತಾಯಿಸುತ್ತಿರುವವರ ವಿರೋಧವನ್ನೂ ಸರಕಾರ ಎದುರಿಸಬೇಕಾಗುತ್ತದೆ. ಒಟ್ಟಿನಲ್ಲಿ ಸರಕಾರ ಅಡಕತ್ತರಿಗೆ ಸಿಲುಕಿದೆ.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಾಮಕರಣ ವಿವಾದ ಎಲ್ಲಿಗೆ ಹೋಗಿ ಮುಟ್ಟುತ್ತದೋ ಗೊತ್ತಿಲ್ಲ. ಸದ್ಯಕ್ಕಂತೂ ಇದು ಬಿಸಿ ತುಪ್ಪ. ಉಗುಳಿದರೆ, ತುಪ್ಪ ನಷ್ಟವಾಗತ್ತೆ, ಉಗುಳದಿದ್ದರೆ ಗಂಟಲೇ ಸುಡುತ್ತದೆ. ಸರಕಾರ ಈಗ ಏನು ಮಾಡುತ್ತದೋ ಕಾದು ನೋಡಬೇಕಷ್ಟೇ?
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications