ಸಾ.ಕೃ. ರಾಮಚಂದ್ರರಾಯರಿಗೆ ಅ.ನ.ಕೃ. ಪ್ರಶಸ್ತಿ ಪ್ರದಾನ
ಬೆಂಗಳೂರು : ಕಲೆ, ಸಾಹಿತ್ಯ ಸೇವೆಗೆ ನೀಡಲಾಗುವ ಅ.ನ.ಕೃ. ಪ್ರಶಸ್ತಿ ಯನ್ನು ಹಿರಿಯ ಮನಶ್ಶಾಸ್ತ್ರ ಪ್ರಾಧ್ಯಾಪಕ, ಬಹುಭಾಷಾ ಕೋವಿದ ಹಾಗೂ ಸಂಶೋಧಕ ಪ್ರೋ. ಸಾ.ಕೃ. ರಾಮಚಂದ್ರರಾವ್ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.
ಭಾನುವಾರ ಬೆಳಗ್ಗೆ ಬಸವನಗುಡಿ ನ್ಯಾಷನಲ್ ಕಾಲೇಜು ಸಭಾಂಗಣದಲ್ಲಿ ಅ.ನ.ಕೃ. ಪ್ರತಿಷ್ಠಾನ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರು ಸಾಲಿಗ್ರಾಮ ಕೃಷ್ಣರಾವ್ ರಾಮಚಂದ್ರರಾವ್ ಅವರಿಗೆ ಕರ್ನಾಟಕ ಭೂಪಟವುಳ್ಳ ಫಲಕ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದರು. ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಹಾರನಹಳ್ಳಿ ರಾಮಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಾ.ಕೃ. ರಾಮಚಂದ್ರರಾವ್ ಕಿರು ಪರಿಚಯ : ಮನಶ್ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ನಿವೃತ್ತರಾಗಿರುವ ರಾಯರು, ಸಂಶೋಧಕ, ವಿಚಾರವಾದಿ ಹಾಗೂ ನಿಷ್ಣಾತ ಕಲಾವಿದರು. ಭಾರತೀಯ ಸಾಂಸ್ಕೃತಿಕ ಅಧ್ಯಯನ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ.
ವಿದ್ಯಾಲಂಕಾರ ಪ್ರಶಸ್ತಿಯನ್ನೂ ಪಡೆದಿರುವ ರಾಯರು ಮಕ್ಕಳ ಸಾಹಿತ್ಯ ಕ್ಷೇತ್ರಕ್ಕೂ ಅನುಪಮ ಕೊಡುಗೆ ನೀಡಿದ್ದಾರೆ. ಚಿತ್ರಕಲೆ, ಶಿಲ್ಪಕಲೆ ಹಾಗೂ ಸಂಗೀತ ಕ್ಷೇತ್ರದಲ್ಲಿ ನೈಪುಣ್ಯತೆ ಗಳಿಸಿದ್ದಾರೆ. ವಿವಾಹ ಪದ್ಧತಿ, ಪ್ರಾಚೀನ ಸಂಸ್ಕೃತಿ, ಪರಾಮಾನಸ ಶಾಸ್ತ್ರ,, ಬೆಂಗಳೂರು ಕರಗ ಮೊದಲಾದವು ರಾಯರ ಪ್ರಮುಖ ಕೃತಿಗಳು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications