ಸಿಇಟಿ ನಡೆಸಿ, 25000 ಪ್ರೌಢಶಾಲಾ ಶಿಕ್ಷಕರ ನೇಮಕಾತಿ
ದಾವಣಗೆರೆ : ರಾಜ್ಯದ ಪ್ರೌಢಶಾಲೆಗಳಿಗೆ 25 ,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಸದ್ಯದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ಎಚ್.ವಿಶ್ವನಾಥ್ ತಿಳಿಸಿದ್ದಾರೆ.
ಭಾನುವಾರ ಇಲ್ಲಿ ಕುರುಬ ಜನಾಂಗದ ಸಭೆಯಾಂದರಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಿ, ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಸಿಇಟಿಯ ರೂಪುರೇಷೆ ಇನ್ನೂ ಸಿದ್ಧವಾಗಬೇಕಿರುವುದರಿಂದ ನೇಮಕಾತಿ ಪ್ರಕ್ರಿಯೆ ಸಹಜವಾಗಿಯೇ ಕೊಂಚ ವಿಳಂಬವಾಗಲಿದೆ ಎಂದರು. ಪ್ರಾಥಮಿಕ- ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಅಧಿಕವಾಗಿರುವ ಬೋಧಕ ಸಿಬ್ಬಂದಿಯನ್ನು ಸ್ಥಳಾಂತರಿಸುವ ಕುರಿತು ಸರ್ಕಾರ ಕ್ರಿಯಾಶೀಲವಾಗಿದೆ ಎಂದು ವಿಶ್ವನಾಥ್ ಹೇಳಿದರು.
ಹೊಸ ಟಿ.ಸಿಎಚ್, ಸಿ.ಪಿಎಡ್, ಬಿ.ಪಿಎಡ್ ಕಾಲೇಜುಗಳನ್ನು ತೆರೆಯಲು ಅನುಮತಿಯ ಬಗ್ಗೆ ಈಗಿರುವ ನಿರ್ಬಂಧವನ್ನು ತೆಗೆದು ಹಾಕಲು ಸರ್ಕಾರ ಯೋಚಿಸುತ್ತಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಿ.ಬಿ.ಚಂದ್ರೇಗೌಡ ನೇತೃತ್ವದಲ್ಲಿ ಉಪ ಸಮಿತಿಯಾಂದನ್ನು ರಚಿಸಲಾಗಿದ್ದು, ಹೊಸ ಕಾಲೇಜು ಸ್ಥಾಪನೆ ಅಗತ್ಯವೇ, ಇಲ್ಲವೇ ಎಂಬ ಬಗ್ಗೆ ಅದು ವರದಿ ಸಲ್ಲಿಸಲಿದೆ ಎಂದರು.
ಇಂಥಾ ಹೊಸ ಕಾಲೇಜುಗಳ ಸ್ಥಾಪನೆ ಬಗ್ಗೆ ಬೇಡಿಕೆ ಬಹಳಷ್ಟಿದೆ. ಆಯಾ ಜಿಲ್ಲೆಗಳ ಯಾವ ಯಾವ ಪ್ರದೇಶಗಳಲ್ಲಿ ಶಿಕ್ಷಣ ತರಪೇತಿ ಸಂಸ್ಥೆಗಳು ಈಗ ಇಲ್ಲವೋ ಅಂಥ ಪ್ರದೇಶಗಳಲ್ಲಿ ಕಾಲೇಜುಗಳ ಸ್ಥಾಪನೆಗೆ ಆದ್ಯತೆ ಕೊಡಲಾಗುವುದು. ರಾಜ್ಯದಲ್ಲೇ ಕೋಲಾರ ಜಿಲ್ಲೆಯಲ್ಲಿ ಅಧಿಕ, ಅಂದರೆ 16 ಟಿಸಿಎಚ್ ಕಾಲೇಜುಗಳಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೇವಲ ಒಂದೇ ಒಂದು ಟಿಸಿಎಚ್ ಕಾಲೇಜು ಇದೆ ಎಂದು ವಿಶ್ವನಾಥ್ ತಿಳಿಸಿದರು.
ಈ ಹಿಂದೆ ಇದ್ದ ಸರ್ಕಾರ ಶಿಕ್ಷಣ ತರಪೇತಿ ಕಾಲೇಜುಗಳ ಸ್ಥಾಪನೆಯನ್ನು ನಿಲ್ಲಿಸಲು ನಿರ್ಧರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications