ಭವಿಷ್ಯದ ಸವಾಲುಗಳನ್ನು ಎದುರಿಸಲು ಕರ್ನಾಟಕ ಸರ್ಕಾರ ಸಜ್ಜು : ಕೃಷ್ಣ
ನವದೆಹಲಿ : ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ರಾಜ್ಯ ಸರಕಾರ ಮಾರುಕಟ್ಟೆ ಪ್ರವೇಶಿಸಲು 200 ಕೋಟಿ ರುಪಾಯಿಗಳ ಆವರ್ತನಿಧಿ ಸ್ಥಾಪಿಸಿದೆ, ಕೇಂದ್ರವೂ ಈ ನಿಧಿಗೆ ಅಷ್ಟೇ ಮೊತ್ತದ ಅನುದಾನ ನೀಡುವ ಮೂಲಕ ಆವರ್ತ ನಿಧಿ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಕೃಷ್ಣ ಸೋಮವಾರ ಇಲ್ಲಿ ತಿಳಿಸಿದರು.
ಭವಿಷ್ಯದ ಸವಾಲುಗಳನ್ನು ಎದುರಿಸಲು ರಾಜ್ಯ ಸರಕಾರ ಸಜ್ಜಾಗಿದೆ. ಜೈವಿಕ ತಂತ್ರಜ್ಞಾನ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಪ್ರಗತಿಗೆ ಒತ್ತು ನೀಡಿದೆ. ಅಂತೆಯೇ ರಾಜ್ಯದ ರೈತರ ಹಿತದ ಬಗ್ಗೆಯೂ ಕಾಳಜಿ ವಹಿಸಿದೆ. ಬೆಲೆ ಕುಸಿತದ ಸಂದರ್ಭದಲ್ಲಿ ರೈತರು ಆತ್ಮಹತ್ಯೆಯ ಮಾರ್ಗ ಹಿಡಿಯುತ್ತಿದ್ದಾರೆ. ಇದನ್ನು ತಪ್ಪಿಸಲು ಆವರ್ತ ನಿಧಿ ಸ್ಥಾಪಿಸಲಾಗಿದೆ. ರೈತರ ನೆರವಿಗೆ ನಿಂತಿರುವ ರಾಜ್ಯ ಸರಕಾರಕ್ಕೆ ಕೇಂದ್ರ ನೆರವಾಗಬೇಕು ಎಂದರು.
ಕೃಷಿ ಉತ್ಪನ್ನಗಳ ಮೇಲೆ ತೆರಿಗೆ, ಆಮದು ವಸ್ತುಗಳ ಬೆಲೆಯ ನಿಗದಿ ಮುಂತಾದ ವಿಷಯಗಳಲ್ಲಿ ಅದರಲ್ಲೂ ಕೃಷಿ ಉತ್ಪನ್ನಗಳ ಆಮದು - ರಫ್ತು ನೀತಿಯ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಕೇಂದ್ರ ಸರಕಾರ ರಾಜ್ಯ ಸರಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೃಷ್ಣ ಒತ್ತಾಯಿಸಿದರು.
ಆಹಾರ ಧಾನ್ಯಗಳು, ಕೃಷಿ ಉತ್ಪನ್ನಗಳ ದಾಸ್ತಾನು ಹಾಗೂ ಸಾಗಣೆಗೆ ಇರುವ ನಿರ್ಬಂಧಗಳನ್ನು ತೆಗೆದುಹಾಕುವಂತೆ ಕೃಷ್ಣ ಕೇಂದ್ರ ಸರಕಾರವನ್ನು ಒತ್ತಾಯಿಸಿದರು. ದೇಶದೆಲ್ಲೆಡೆ ಕೃಷಿ ಉತ್ಪನ್ನಗಳ ಮುಕ್ತ ಸಾಗಣೆಗೆ ಅವಕಾಶ ಇರಬೇಕು ಎಂದೂ ಅವರು ಪ್ರತಿಪಾದಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications