‘2025ಕ್ಕೆ ಆರ್ಥಿಕ ಕ್ಷೇತ್ರದಲ್ಲಿ ಭಾರತ ಅಮೆರಿಕಕ್ಕಿಂತ ಮುಂದೆ’
ನ್ಯೂಯಾರ್ಕ್ : ಮುಂದಿನ 25 ವರ್ಷಗಳಲ್ಲಿ ಭಾರತ ಮತ್ತು ಚೀನಾ ದೇಶಗಳು ಆರ್ಥಿಕ ಕ್ಷೇತ್ರದಲ್ಲಿ ಅಮೆರಿಕಾ ಮತ್ತು ಯುರೋಪ್ಗಳಿಗಿಂತ ಮುಂದೆ ಇರಲಿದೆ ಎಂದು ವಿಶ್ವಬ್ಯಾಂಕ್ನ ಮಾಜಿ ಆರ್ಥಿಕ ತಜ್ಞ ಶಾಹಿದ್ ಜಾವೆದ್ ಬುರ್ಕಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಜಾಗತಿಕ ಉತ್ಪನ್ನಕ್ಕೆ ಭಾರತ ಹಾಗೂ ಚೀನಾ ದೇಶಗಳ ಪಾಲನ್ನು ಅಮೆರಿಕಾ ಹಾಗೂ ಯುರೋಪ್ನೊಂದಿಗೆ ಹೋಲಿಸಿದರೆ, ಅದು 2025ನೇ ಇಸವಿ ಹೊತ್ತಿಗೆ ಸರಿಸಮಾನವಾಗಿರುತ್ತದೆ. ಪ್ರಸಕ್ತ ಆರ್ಥಿಕ ಪರಿಸ್ಥಿತಿಯೇ ಮುಂದುವರಿದಲ್ಲಿ ಭಾರತವು ಜಪಾನ್ ಮತ್ತು ಜರ್ಮನಿ ದೇಶಗಳನ್ನು ಹಿಂದೆ ಹಾಕಿ ಮುನ್ನಡೆಯಲಿದೆ.
ಮಿಗಿಲಾಗಿ ವಿಶ್ವದ ಆರ್ಥಿಕ ರಂಗದಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಸಾಧ್ಯತೆ ಇದೆ. ಚೀನಾ ಕೂಡ ಆ ಹೊತ್ತಿಗೆ ಅಮೆರಿಕೆಗಿಂತ ಮುಂದಾಗಿರುತ್ತದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಈಗ ಭಾರತದ ಆರ್ಥಿಕ ಮಟ್ಟ ಅಮೆರಿಕೆಗಿಂತ ಶೇ. 40ರಷ್ಟು ಹೆಚ್ಚಾಗಿದೆ. ವಿಶ್ವ ಆರ್ಥಿಕ ವಲಯದಲ್ಲಿ ಜಪಾನ್ ಹಾಗೂ ಜರ್ಮನಿ ನಾಲ್ಕನೇ ಹಾಗೂ 5ನೇ ಸ್ಥಾನದಲ್ಲಿವೆ. ಬ್ರೆಜಿಲ್ ಹಾಗೂ ಮೆಕ್ಸಿಕೋಗಳು ಫ್ರಾನ್ಸ್ ಹಾಗೂ ಬ್ರಿಟನ್ನನ್ನು ಹಿಂದೆ ಹಾಕಿ ಆರು ಮತ್ತು ಏಳನೇ ಸ್ಥಾನವನ್ನು ಆಕ್ರಮಿಸಿವೆ ಎಂದು ಅವರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications