ಮಂಗ ಮಾನವ : ಮನ ಶಾಸ್ತ್ರಜ್ಞರಿಗೆ ದೆಹಲಿ ಪೊಲೀಸರ ಮೊರೆ
ನವದೆಹಲಿ : ದಿನೇ ದಿನೇ ಕಗ್ಗಂಟಾಗುತ್ತಿರುವ ಮಂಗ ಮಾನವನ ರಹಸ್ಯವನ್ನು ಬಿಡಿಸುವಲ್ಲಿ ತೊಂದರೆ ಎದುರಿಸುತ್ತಿರುವ ರಾಜಧಾನಿಯ ಪೊಲೀಸರು, ಅಪರಾಧಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಮನಶಾಸ್ತ್ರಜ್ಞರು ಹಾಗೂ ಸಿಎಫ್‌ಎಸ್‌ಎಲ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ನೆರವನ್ನು ಪಡೆಯಲು ಉದ್ದೇಶಿಸಿದ್ದಾರೆ.
ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಹ್ಯೂಮನ್ ಬಿಹೇವಿಯರ್ ಅಂಡ್ ಅಲೈಡ್ ಸೈನ್ಸಸ್‌ನ ತಜ್ಞರು ಹಾಗೂ ಪ್ರಸಿದ್ಧ ವೈದ್ಯರು ಸೇರಿದ ತಂಡವೊಂದನ್ನು ರಚಿಸಿ, ಮಂಗ ಮಾನವನ ದಾಳಿಗೆ ತುತ್ತಾದವರ ಗಾಯಗಳ ಬಗ್ಗೆ ಅಭಿಪ್ರಾಯ ಕೋರಲಾಗುವುದು ಎಂದು ದೆಹಲಿ ವಲಯದ ಸಹ ಪೊಲೀಸ್ ಆಯುಕ್ತ ಸುರೇಶ್ ರೈ ಸುದ್ದಿಗಾರರಿಗೆ ತಿಳಿಸಿದ್ದಾರೆ. ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಗಾಯಗಳ ಬಗೆಗಿನ ತಜ್ಞರ ಅಭಿಪ್ರಾಯ ಸಹಕಾರಿಯಾಗುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಈ ನಡುವೆ, ಮಂಕಿ ಫೋಬಿಯಾ ದೆಹಲಿಯ ನಾಗರಿಕರಲ್ಲಿ ಮುಂದುವರಿದಿದ್ದು , ಪೊಲೀಸರಿಗೆ ಬರುವ ಸುಳ್ಳು ಕರೆಗಳೂ ಮುಂದುವರಿದಿವೆ. ಸುಳ್ಳು ಕರೆಗಳನ್ನು ಮಾಡುವುದರಲ್ಲಿ ತೊಡಗಿದ್ದ 8 ಮಂದಿಯನ್ನು ಭಾನುವಾರ ರಾತ್ರಿ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಮಂಗ ಮಾನವನ ಬಗ್ಗೆ ವದಂತಿಗಳನ್ನು ಹಬ್ಬಿಸುವವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications