‘ಸಿಇಟಿ’ ಪ್ರಕ್ರಿಯೆಯಲ್ಲಿ 45 ಹೆಚ್ಚುವರಿ ಇಂಜಿನಿಯರಿಂಗ್ ಕಾಲೇಜು?
ಬೆಂಗಳೂರು : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸುವ ವಿದ್ಯಾರ್ಥಿಗಳ ಪ್ರವೇಶ ಆಯ್ಕೆಗೆ ಹೆಚ್ಚುವರಿ 45 ಇಂಜಿನಿಯರಿಂಗ್ ಕಾಲೇಜುಗಳು ಲಭ್ಯವಾಗುವ ಇಂಗಿತವನ್ನು ಉನ್ನತ ಶಿಕ್ಷಣ ಸಚಿವ ಡಾ. ಜಿ. ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.
ಪ್ರವೇಶಾವಾಕಾಶ ಕಲ್ಪಿಸಲು ಅನುಮತಿ ಕೋರಿದ್ದ 45 ಇಂಜಿನಿಯರಿಂಗ್ ಕಾಲೇಜುಗಳ ಅರ್ಜಿಗಳನ್ನು ರಾಜ್ಯ ಸರ್ಕಾರ ಇತ್ಯರ್ಥ ಪಡಿಸಿದೆ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಸಮಿತಿ ಕೂಡ ಕಾಲೇಜುಗಳ ಆರಂಭಕ್ಕೆ ಹಸಿರು ನಿಶಾನೆ ತೋರಿದೆ. ಇನ್ನೇನಿದ್ದರೂ, ಕಾಲೇಜುಗಳ ಪ್ರಾರಂಭ ಆಯಾ ಆಡಳಿತ ಮಂಡಳಿಗೆ ಬಿಟ್ಟ ವಿಚಾರ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಜೂನ್ 30 ರೊಳಗಾಗಿ ಈ ಕಾಲೇಜುಗಳು ಪ್ರಾರಂಭವಾದರೆ, ಸಿಇಟಿ ಆಯ್ಕೆ ಪ್ರಕ್ರಿಯೆಯಲ್ಲಿ ಈ ಕಾಲೇಜುಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ಹೇಳಿದರು.
ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಶೇ.5 ರ ಮೀಸಲಾತಿ ಕಲ್ಪಿಸಿರುವ ವಿಷಯವನ್ನು ಪ್ರಸ್ತಾಪಿಸಿದ ಪರಮೇಶ್ವರ್, ಅಂದಾಜು 1 ಸಾವಿರ ವೃತ್ತಿಪರ ಶಿಕ್ಷಣದ ಪ್ರವೇಶಗಳು ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ದೊರೆಯುವ ನಿರೀಕ್ಷೆಯಿದೆ ಎಂದರು.
ಜೂನ್ 10 ರಂದು ಸಿಇಟಿ ಫಲಿತಾಂಶ : ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಜೂನ್ 10 ರಂದು ಪ್ರಕಟವಾಗುವುದು, ಸಿಇಟಿ ಪರೀಕ್ಷೆ ಫಲಿತಾಂಶದ ಆಜುಬಾಜಿನಲ್ಲೇ ಪಿಯುಸಿ ಪರೀಕ್ಷೆಯ ಫಲಿತಾಂಶವೂ ಪ್ರಕಟವಾಗುವುದು ಎಂದು ಪರಮೇಶ್ವರ್ ತಿಳಿಸಿದ್ದಾರೆ. ವಿಶ್ವ ವಿದ್ಯಾಲಯ ಮಟ್ಟದಲ್ಲಿ ಜ್ಯೋತಿಷ್ಯವನ್ನು ಅಧ್ಯಯನ ವಿಷಯವನ್ನಾಗಿಸುವ ಕುರಿತು ಅವರು ತಮ್ಮ ವಿರೋಧ ವ್ಯಕ್ತಪಡಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications