ಅರಬ್ಬಿಯಲ್ಲಿ ವಾಯುಭಾರ ಕುಸಿತ : ಕರಾವಳಿಯಲ್ಲಿ ಚಂಡಮಾರುತ ಭೀತಿ
ಬೆಂಗಳೂರು : ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ವಾಯುಭಾರ ಕುಸಿತ ಕಂಡುಬಂದಿದೆ. ತತ್ಪರಿಣಾಮವಾಗಿ ಕರ್ನಾಟಕದ ಕರಾವಳಿ ಪ್ರದೇಶಗಳೂ ಸೇರಿದಂತೆ ಕೊಂಕಣ, ಗೋವಾಗಳಲ್ಲಿ ಭಾರಿ ಮಳೆ ಆಗುತ್ತಿದೆ. ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗುತ್ತಿದ್ದು, ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಆಗಲಿದೆ ಎಂದು ಹವಾಮಾನ ಇಲಾಖೆಯ ಮೂಲಗಳು ತಿಳಿಸಿವೆ.
ಗೋವೆಯ ಪಣಜಿಯಿಂದ ನೈಋತ್ಯಕ್ಕೆ 350 ಕಿ.ಮೀಟರ್ ದೂರದಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದ್ದು, ಇದು ಬುಧವಾರ ಮಧ್ಯಾಹ್ನದ ಹೊತ್ತಿಗೆ ತೀವ್ರವಾಗಿ ಪೂರ್ವ ಹಾಗೂ ಈಶಾನ್ಯದತ್ತ ತಿರುಗಿ ಕರಾವಳಿಯನ್ನೂ ದಾಟುವ ಸಂಭವ ಇದೆ.
ಧಾರಾಕಾರ ಮಳೆ : ವಾಯುಭಾರ ಕುಸಿತದ ಕಾರಣ ಸೋಮವಾರದಿಂದಲೇ ಕರಾವಳಿಯ ಹಲವೆಡೆಗಳಲ್ಲಿ ಮಳೆಯಾಗಿದೆ. ಮಂಗಳವಾರ ಕಾಸರಗೋಡಿನಲ್ಲಿ ಧಾರಾಕಾರವಾಗಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತವಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ದಿನವಿಡೀ ಸುರಿಮಳೆ ಸುರಿದಿದೆ. ಗಂಗೊಳ್ಳಿ ಸಮುದ್ರತೀರ ಹಾಗೂ ಕುಂದಾಪುರಗಳಲ್ಲಿ ಗಾಳಿಯ ಆರ್ಭಟ ತೀವ್ರವಾಗಿದ್ದು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುನ್ಸೂಚನೆಯ ಪ್ರಕಾರ ಕರಾವಳಿ ತೀರದಲ್ಲಿ ಬುಧವಾರ ರಭಸದಿಂದ ಗಾಳಿ ಬೀಸಲಿದ್ದು, ಕರಾವಳಿ ತೀರದ ಗ್ರಾಮಸ್ಥರಿಗೆ ಹಾಗೂ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ತೀವ್ರಗೊಳ್ಳುತ್ತಿರುವ ಚಂಡಮಾರುತದ ಪ್ರಭಾವ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಲ್ಲೂ ಕಂಡುಬರಲಿದೆ ಎಂದು ಇಲಾಖೆ ತಿಳಿಸಿದೆ.
ಅಧಿಕಾರಿಗಳಿಗೆ ಸೂಚನೆ : ಇದು ಮುಂಗಾರು ಮಳೆಯ ಸೂಚನೆ ಎಂದು ಒಳನಾಡಿನ ರೈತರು ಹರ್ಷ ಪಡುತ್ತಿದ್ದರೂ, ಕರಾವಳಿ ತೀರದ ಜನ ಚಂಡಮಾರುತದ ಭೀತಿಯಿಂದ ತತ್ತರಿಸಿದ್ದಾರೆ. ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಹಲವೆಡೆಗಳಲ್ಲಿ ಗರಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದೆ. ಉತ್ತರ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಚಂಡಮಾರುತದ ಪರಿಣಾಮವಾಗಿ ಆಸ್ತಿ ಅಥವಾ ಪ್ರಾಣ ಹಾನಿ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications