ಜೂನ್ 1 ರಿಂದ ರಾಜ್ಯದ ಎಲ್ಲಾ ಶಾಲಾ ಮಕ್ಕಳಿಗೆ ಜೀವ ವಿಮೆ
ಬೆಂಗಳೂರು : 1 ರಿಂದ 10 ನೇ ತರಗತಿವರೆಗಿನ ರಾಜ್ಯದಲ್ಲಿನ ಎಲ್ಲ ಶಾಲೆಗಳ 1 ಕೋಟಿ 10 ಲಕ್ಷ ವಿದ್ಯಾರ್ಥಿಗಳಿಗೆ ಜೀವ ವಿಮೆ ಸೌಲಭ್ಯ ಕಲ್ಪಿಸುವ ವಿಶ್ವದಲ್ಲೇ ಪ್ರಥಮ ಎನ್ನಲಾದ ಐತಿಹಾಸಿಕ ಒಪ್ಪಂದಕ್ಕೆ ರಾಜ್ಯ ಶಿಕ್ಷಣ ಇಲಾಖೆ ಹಾಗೂ ಓರಿಯಂಟಲ್ ವಿಮಾ ಕಂಪನಿ ಶುಕ್ರವಾರ ಸಹಿ ಹಾಕಿದವು. ಜೂನ್1 ರಿಂದ ಶಾಲಾ ಮಕ್ಕಳ ಈ ಜೀವವಿಮಾ ಯೋಜನೆ ಜಾರಿಗೆ ಬರಲಿದೆ.
ಶಿಕ್ಷಣ ಸಚಿವ ಎಚ್. ವಿಶ್ವನಾಥ್ ಅವರ ಹಾಜರಿಯಲ್ಲಿ ನಡೆದ ಒಪ್ಪಂದದಲ್ಲಿ ಓರಿಯಂಟಲ್ ವಿಮಾ ಕಂಪನಿಯ ಪರವಾಗಿ ಅದರ ಮೇನೇಜರ್ ಸುಂದರಂ ಸಹಿ ಹಾಕಿದರು. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಮಾತ್ರವಲ್ಲದೆ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳಿಗೂ ಈ ವಿಮಾ ಯೋಜನೆಯ ಸೌಲಭ್ಯ ಪಡೆಯಲಿದ್ದಾರೆ ಎಂದು ಒಪ್ಪಂದದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ವಿಶ್ವನಾಥ್ ತಿಳಿಸಿದರು.
ಜೀವವಿಮೆ ಪರಿಹಾರ ಹಣದ ಪೈಕಿ ಪ್ರತಿಶತ 33 ರಷ್ಟನ್ನು ರೋಟರಿ ಕ್ಲಬ್ ಭರಿಸಲಿದೆ. ಸುರಕ್ಷಾ ವಿಮೆ ಎನ್ನುವ ಈ ಯೋಜನೆಯಡಿ ವಿದ್ಯಾರ್ಥಿ ಆಕಸ್ಮಿಕವಾಗಿ ಮೃತನಾದರೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 25 ಸಾವಿರ ರುಪಾಯಿ ನೀಡಲಾಗುವುದು. ವಿಮಾ ಪರಿಹಾರ ಮೊತ್ತದ ಪ್ರತಿಶತ 32 ರಷ್ಟನ್ನು ರೋಟರಿ ಕ್ಲಬ್ ಭರಿಸಿದರೆ, ಶೇ. 67 ರಷ್ಟನ್ನು ರಾಜ್ಯ ಸರ್ಕಾರ ಭರಿಸುವುದು. ಉಳಿದ ಶೇ. 1 ರ ಪಾಲನ್ನು ಓರಿಯಂಟಲ್ ವಿಮಾ ಕಂಪನಿ ಭರಿಸುತ್ತದೆ.
ಅಪಘಾತಗಳಲ್ಲಿ ಶಾಶ್ವತ ಅಂಗವಿಕಲನಾದರೆ 25 ಸಾವಿರ ರುಪಾಯಿ ಹಾಗೂ ಕೈ ಕಾಲು ಮುರಿದರೆ ಚಿಕಿತ್ಸೆಗಾಗಿ 1 ಸಾವಿರ ರು. ಪರಿಹಾರ ನೀಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ಅಥವಾ ರೋಟರಿ ಸಂಸ್ಥೆಗಳು ಈ ವಿಮಾ ಸೌಲಭ್ಯವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಬಹುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications