ಡಬ್ಲ್ಯುಟಿಓ ಹೆಸರಲ್ಲಿ ಒಕ್ಕಲುತನಕ್ಕೆ ಕೊಡಲಿ -ಪ್ರೊ. ನಂಜುಂಡಸ್ವಾಮಿ
ಮಂಗಳೂರು : ಯುರೋಪ್ ದೇಶಗಳು ಹಾಗೂ ಅಮೇರಿಕಾ ತಮ್ಮ ಮಾರುಕಟ್ಟೆಗಳನ್ನು ರಕ್ಷಿಸಿಕೊಳ್ಳಲು ಹಾಗೂ ಹೆಚ್ಚುವರಿ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಜಾಣ ಮಾತುಗಳಲ್ಲಿ ವಿಶ್ವ ವ್ಯಾಪಾರ ಒಪ್ಪಂದ ರೂಪಿಸಿವೆ. ಇದರ ಆಳ ಅಗಲ ತಿಳಿಯದ ಅಭಿವೃದ್ಧಿಶೀಲ ರಾಷ್ಟ್ರಗಳು ಒಪ್ಪಂದಕ್ಕೆ ಬಲಿಪಶುಗಳಾಗುತ್ತಿವೆ ಎಂದು ರಾಜ್ಯ ರೈತಸಂಘದ ಮುಖಂಡ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಹೇಳಿದ್ದಾರೆ.
ಪುರಭವನದಲ್ಲಿ ಶುಕ್ರವಾರ ನಡೆದ ರೈತರ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ವಿಶ್ವ ವ್ಯಾಪಾರ ಒಪ್ಪಂದದಿಂದ ಉಂಟಾಗಿರುವ ಗಂಭೀರ ಪರಿಸ್ಥಿತಿಯ ವಿಶ್ಲೇಷಣೆ ನಡೆಸಿದರು. ರೈತರು ಸಂಕಷ್ಟದಲ್ಲಿದ್ದಾರೆ, ಇಂಥಾ ಹೊತ್ತಿನಲ್ಲಿ ವಿಚಾರ ಸಂಕಿರಣಗಳ ಅಗತ್ಯವಿಲ್ಲ . ಜನರನ್ನು ಸಮಾಧಾನ ಪಡಿಸಲು ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಪ್ರೊ. ಎಂ.ಡಿ.ಎನ್. ಆಪಾದಿಸಿದರು.
ರೈತರ ರಕ್ಷಣೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಜವಳಿ ಸಚಿವರು ಸಂಸತ್ತಿನ ಹೊರಗಡೆ ಸುಳ್ಳು ಹೇಳುತ್ತಿದ್ದರೆ, ಹಣಕಾಸು ಸಚಿವರು ಸಂಸತ್ತಿನೊಳಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಟೀಕಿಸಿದ ಅವರು, ರೈತರು ಸಬ್ಸಿಡಿ ಕೇಳುವ ಭಿಕ್ಷುಕರಲ್ಲ ಎಂದರು.
ಯುರೋಪಿಯನ್ ಒಕ್ಕೂಟದ ರೈತರು ನೇರ ಆದಾಯ ಪಾವತಿ ಮೂಲಕ ಸಬ್ಸಿಡಿ ಪಡೆಯುತ್ತಿದ್ದಾರೆ. ಆದರೆ, ಭಾರತದಲ್ಲಿ ವಿಶ್ವ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಸಬ್ಸಿಡಿ ರದ್ದು ಪಡಿಸಲಾಗಿದೆ. ಒಕ್ಕಲುತನಕ್ಕೆ ಕೊಡಲಿಯೇಟು ಹಾಕಲಾಗಿದೆ. ವಿದ್ಯುತ್ ದರವನ್ನು ಏರಿಸುವ ಮೂಲಕ ರಾಜ್ಯ ಸರ್ಕಾರ ರೈತರನ್ನು ಶೋಷಿಸುತ್ತಿದೆ ಎಂದು ನಂಜುಂಡಸ್ವಾಮಿ ಆಪಾದಿಸಿದರು. ಡಿ.ಕೆ. ಚೌಟ, ಮಾಜಿ ಸಂಸದ ನಾರಾಯಣ ಸ್ವಾಮಿ, ಚೆನ್ನಪ್ಪ ಗೌಡ, ದ್ವಾರಕಾನಾಥ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
(ಮಂಗಳೂರು ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications