Get Updates
Get notified of breaking news, exclusive insights, and must-see stories!

ಸಿಪ್ಪೆ ಸಹಿತ ಗೇರುಬೀಜಕ್ಕೆ ಮಾರುಕಟ್ಟೆ ಶುಲ್ಕ ವಿನಾಯಿತಿ

ಬೆಂಗಳೂರು : ರಫ್ತು ಮಾಡುವ ಸಿಪ್ಪೆ ಸಹಿತ ಗೇರುಬೀಜದ ಮೇಲೆ ವಿಧಿಸಲಾಗುತ್ತಿದ್ದ ಮಾರುಕಟ್ಟೆ ಶುಲ್ಕಕ್ಕೆ ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಈ ವಿಷಯವನ್ನು ವಾರ್ತಾ ಸಚಿವ ಬಿ.ಕೆ. ಚಂದ್ರಶೇಖರ್‌ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು. ವಿಶ್ವ ವ್ಯಾಪಾರ ಸಂಘಟನೆ ಒಪ್ಪಂದದ ನಂತರ ಮಾರುಕಟ್ಟೆಯಲ್ಲಿ ಈ ಸರಕಿನ ಬೆಲೆ ಕುಸಿಯುವ ಸಾಧ್ಯತೆ ಇರುವುದರಿಂದ ಗೇರುಬೀಜ ಬೆಳೆಗಾರರಿಗೆ ತೀರಾ ತೊಂದರೆಯಾಗದಂತೆ ಮುನ್ನೆಚ್ಚರಿಕೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.

ಸುಮಾರು 25 ಸಾವಿರಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು ಈ ಉದ್ಯಮದಲ್ಲಿ ತೊಡಗಿದ್ದಾರೆ. ಈ ಉದ್ಯಮ ಲಾಭದಾಯಕವಾಗಿ ಮುಂದುವರೆಯುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದ ಚಂದ್ರಶೇಖರ್‌, ವಾರ್ಷಿಕ 300 ಕೋಟಿ ರೂಪಾಯಿ ವಿದೇಶೀ ವಿನಿಮಯ ಗಳಿಸುತ್ತಿರುವ ಈ ಉದ್ಯಮದ ಒಟ್ಟು ಉತ್ಪಾದನೆಯಲ್ಲಿ ಶೇ 28ರಷ್ಟು ರಫ್ತು ಮಾಡಲಾಗುತ್ತಿದೆ ಎಂದು ವಿವರಿಸಿದರು.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+