ಸಮೂಹ ಮಾಧ್ಯಮ ಕ್ಷೇತ್ರದ 3 ಹೊಸ ಯೋಜನೆಗಳ ಉದ್ಘಾಟನೆ
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭ್ಯುದಯಕ್ಕೆ ಹೊಸ ಆಯಾಮ ನೀಡುವ ಸಮೂಹ ಮಾಧ್ಯಮ ಕ್ಷೇತ್ರದ ಮೂರು ವಿನೂತನ ಯೋಜನೆಗಳನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಶನಿವಾರ ಉದ್ಘಾಟಿಸಿದರು.
ರಾಜ್ಯದ ಸಮೂಹ ಮಾಧ್ಯಮ ಕ್ಷೇತ್ರದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಮನೆ ಬಾಗಿಲಿಗೆ ಕೊಂಡೊಯ್ದು, ದುರ್ಬಲ ವರ್ಗದವರೂ ಅದರ ಪ್ರಯೋಜನ ಪಡೆಯಲೆಂಬ ಆಶಯದಿಂದ ರಾಜ್ಯ ವಾರ್ತಾ ಇಲಾಖೆ ರೂಪಿಸಿರುವ ಈ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂಥ ಯೋಜನೆಗಳು ದುರ್ಬಲ ವರ್ಘದವರ ಪ್ರಗತಿಯ ಮೇಲೆ ಪ್ರಭಾವ ಬೀರಬಲ್ಲಂಥ ಭೂಮಿಕೆಯನ್ನು ಕಲ್ಪಿಸುತ್ತವೆ ಎಂದರು.
ಎಲ್ಲ ಇಲಾಖೆಗಳೂ ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಏಳಿಗೆಗೆ ನೆರವಾಗುವಂತಹ ಯೋಜನೆಗಳಿಗೆ ಸ್ವಲ್ಪ ಹಣ ಮೀಸಲಿಡಬೇಕು ಎಂದೂ ಅವರು ಸಲಹೆ ಮಾಡಿದರು. ಪರಿಶಿಷ್ಟರ ಕಾಲೋನಿಗಳಿಗೆ ದೂರದರ್ಶನ, ಜಿಲ್ಲಾ ಕೇಂದ್ರಗಳಲ್ಲಿ ಪೂರ್ಣ ಪ್ರಮಾಣದ ಮಾಧ್ಯಮ ಕೇಂದ್ರ ಸ್ಥಾಪನೆಗೆ ಪರಿಶಿಷ್ಟರಿಗೆ ನೆರವು, ವಿದ್ಯಾರ್ಥಿ ವೇತನ ಕಾರ್ಯಕ್ರಮ ರೂಪಿಸಿರುವ ವಾರ್ತಾ ಸಚಿವರನ್ನು ಅವರು ಪ್ರಶಂಸಿಸಿದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್, ಕಾಗೋಡು ತಿಮ್ಮಪ್ಪ ಮೊದಲಾದವರು ಭಾಗವಹಿಸಿದ್ದರು.
ಯೋಜನೆಯ ವಿವರ - ವಿದ್ಯಾರ್ಥಿ ವೇತನ : ಆಯ್ದ ಸಂಸ್ಥೆಗಳಲ್ಲಿ ಅಂದರೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಜರ್ನಲಿಸಂ ಅಂಡ್ ನ್ಯೂ ಮೀಡಿಯ- ಬೆಂಗಳೂರು, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್- ನವದೆಹಲಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಕಮ್ಯುನಿಕೇಷನ್- ಮಣಿಪಾಲ ಹಾಗೂ ಏಷ್ಯನ್ ಮೀಡಿಯಾ ಇನ್‌ಸ್ಟಿಟ್ಯೂಟ್ -ಚೆನ್ನೈಗಳಲ್ಲಿ ಪತ್ರಿಕೋದ್ಯಮ ಸಮೂಹ ಮಾಧ್ಯಮ ಶಿಕ್ಷಣ ಪಡೆಯ ಬಯಸುವ ಪ್ರತಿಭಾವಂತ ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳಿಗೆ ಶಿಕ್ಷಣ ಪೂರ್ವ ವೆಚ್ಚವನ್ನು ಸರಕಾರವೇ ಭರಿಸುವುದು.
ಮಾಧ್ಯಮ ಕೇಂದ್ರ : ಜಿಲ್ಲಾ ಕೇಂದ್ರಗಳಲ್ಲಿ ಮಾಧ್ಯಮ ಕೇಂದ್ರ ಸ್ಥಾಪನೆಗೆ ಸರಕಾರದ ನೆರವು. ಈ ಮಾಧ್ಯಮ ಕೇಂದ್ರಗಳಿಂದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಿಗೆ ಸಹಾಯ ಮತ್ತು ಸಹಕಾರ. ಮಾಧ್ಯಮ ಕೇಂದ್ರಗಳು ಕಂಪ್ಯೂಟರ್, ಲೇಸರ್ ಪ್ರಿಂಟರ್, ಫ್ಯಾಕ್ಸ್ ಯಂತ್ರ, ಫೋಟೋಕಾಪಿಯರ್ ಮತ್ತು ಸುದ್ದಿ ಸಂಸ್ಥೆಗಳ ಸಂಪರ್ಕ ಒದಗಿಸುವ ಮೂಲಭೂತ ಸೌಲಭ್ಯವುಳ್ಳ ಮಾಹಿತಿ ಕೇಂದ್ರ ಸ್ಥಾಪನೆ.
ಪ್ರಥಮ ಹಂತವಾಗಿ ಈ ಯೋಜನೆ ಬೀದರ್, ಬೆಳಗಾವಿ, ಮೈಸೂರು, ಉಡುಪಿ ಮತ್ತು ಕೋಲಾರ ಜಿಲ್ಲೆಗಳಲ್ಲಿ ಆರಂಭವಾಗಲಿದೆ.
ದೂರದರ್ಶನ : ರಾಜ್ಯಾದ್ಯಂತ 200 ಪರಿಶಿಷ್ಟ ಜಾತಿ ಹಾಗೂ ಪಂಗಡದ ಕಾಲೋನಿಗಳಿಗೆ ಒಂದೊಂದು ಬಣ್ಣದ ಟಿ.ವಿ. ಒದಗಿಸುವುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications