ಎಸ್ಸೆಸ್ಸೆಲ್ಸಿ ಪರೀಕ್ಷಾ ಅಕ್ರಮಕ್ಕೆ ಅವಕಾಶವಿತ್ತ ಅಧಿಕಾರಿಗಳ ಕಡ್ಡಾಯ ನಿವೃತ್ತಿ ?
ಬೆಂಗಳೂರು : ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿದು, ಫಲಿತಾಂಶವೂ ಪ್ರಕಟವಾಗಿದೆ. ತೇರ್ಗಡೆಯಾದ ವಿದ್ಯಾರ್ಥಿಗಳು ಕಾಲೇಜು ಪ್ರವೇಶಕ್ಕಾಗಿ ಪರದಾಡುತ್ತಿದ್ದಾರೆ. ಈ ಮಧ್ಯೆ ಫಲಿತಾಂಶ ಪ್ರಕಟಣೆಯಲ್ಲೂ ಕೆಲವು ಗೊಂದಲಗಳುಂಟಾಗಿವೆ.
ಇದೆಲ್ಲಕ್ಕಿಂತ ಮಿಗಿಲಾಗಿ ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಬಯಲಾದ ವಿಷಯ ಭಾರಿ ವಿವಾದವನ್ನೇ ಸೃಷ್ಟಿಸಿತ್ತು. ತಿಂಗಳುಗಳ ನಂತರ ಎಚ್ಚೆತ್ತಿರುವ ಸರಕಾರ ಪ್ರಶ್ನೆಪತ್ರಿಕೆ ಬಹಿರಂಗಗೊಂಡ ಪ್ರಕರಣದ ಬಗ್ಗೆ ಸಮಗ್ರ ತನಿಖೆ ಕೈಗೊಳ್ಳಲು ನಿರ್ಧರಿಸಿದೆ. ರಾಜ್ಯ ಸಿ.ಓ.ಡಿ ಪೊಲೀಸರಿಗೆ ಈ ಜವಾಬ್ದಾರಿ ವಹಿಸಿದೆ.
ಈ ವಿಷಯವನ್ನು ರಾಜ್ಯ ಪ್ರಾಥಮಿಕ ಶಿಕ್ಷಣ ಸಚಿವ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಶಿಕ್ಷಣದಲ್ಲಿ ಅತಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಶ್ನೆಪತ್ರಿಕೆಗಳು ಬಹಿರಂಗವಾದ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ, ಅಮೂಲಾಗ್ರ ತನಿಖೆ ನಡೆಸುವಂತೆ ಸಿ.ಓ.ಡಿ.ಗೆ ಸೂಚಿಸಲಾಯಿತು ಎಂದು ಅವರು ತಿಳಿಸಿದರು.
ಈ ಸಂಬಂಧ ತನಿಖೆ ನಡೆಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸಿ.ಓ.ಡಿ ಪೊಲೀಸರಿಗೆ ಸೂಚಿಸಲಾಗಿದೆ. ಮುಂದೆ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆಯದಂತೆ ವ್ಯಾಪಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಈ ಬಾರಿ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಹಲವು ತಪ್ಪುಗಳು ನಡೆದಿವೆ ಎಂಬುದನ್ನು ಸಚಿವರು ಒಪ್ಪಿಕೊಂಡರು. ಮಂಡಳಿಗೆ ಕಾಯಕಲ್ಪ ನೀಡಲಾಗುವುದೂ ಎಂದೂ ಸಚಿವರು ಸ್ಪಷ್ಟಪಡಿಸಿದರು.
ಕ್ಷಮೆ : ಮಂಡಳಿಯ ಅಧಿಕಾರಿಗಳ ಹಾಗೂ ಸಿಬ್ಬಂದಿಯ ನಡುವಿನ ಅಸಹಕಾರದಿಂದ ತಪ್ಪುಗಳು ಘಟಿಸಿವೆ. ಆಗಿರುವ ತಪ್ಪನ್ನು ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಕ್ಷಮಿಸಬೇಕು ಎಂದು ಮಂಡಳಿ ಪರವಾಗಿ ಸಚಿವರು ಕ್ಷಮೆ ಕೋರಿದರು. ಇನ್ನು ಮುಂದೆ ಇಂತಹ ಪ್ರಮಾದಗಳು ಜರುಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪರೀಕ್ಷೆ ಅಕ್ರಮಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿಯೂ ತಿಳಿಸಿದರು.
ಕಡ್ಡಾಯ ನಿವೃತ್ತಿ : ಪರೀಕ್ಷೆ ಅಕ್ರಮ ನಡೆಯಲು ಅವಕಾಶ ನೀಡಿದ ಐದು ಮಂದಿ ಜಂಟಿ ಮುಖ್ಯ ಪರೀಕ್ಷಾಧಿಕಾರಿಗಳಿಗೆ ತಲಾ 1 ಸಾವಿರ ರುಪಾಯಿ ದಂಡ ವಿಧಿಸಲಾಗಿದೆ. ತಪ್ಪಿತಸ್ಥರನ್ನು ಕಡ್ಡಾಯ ನಿವೃತ್ತಿಗೊಳಿಸುವ ಬಗ್ಗೆಯೂ ಸರಕಾರ ಚಿಂತಿಸುತ್ತಿದೆ ಎಂದು ಸಚಿವರು ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಕೃಷ್ಣ ಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications