ಮೇಷ್ಟ್ರು ವ್ಯಾಪಾರಿಯಾಗುತ್ತಿದ್ದಾರೆ - ಪ್ರೊ. ಜಿಎಸ್‌ಎಸ್ ವಿಷಾದ
ಬೆಂಗಳೂರು : ಅಧ್ಯಾಪಕರಲ್ಲಿ ವ್ಯಾಪಾರೀ ಮನೋಭಾವ ಹೆಚ್ಚುತ್ತಿದೆ. ಇದರಿಂದಾಗಿಯೇ ಅಧ್ಯಾಪಕರಲ್ಲಿ ನೈತಿಕ ಮೌಲ್ಯಗಳು ಕುಸಿಯುತ್ತಿದ್ದು , ಸಮಾಜ ಕಲುಷಿತಗೊಂಡು ದೇಶ ಹಾಳಾಗುತ್ತಿದೆ ಎಂದು ಹಿರಿಯ ಕವಿ ಪ್ರೊ.ಜಿ.ಎಸ್. ಸಿದ್ಧಲಿಂಗಯ್ಯ ವಿಷಾದಿಸಿದ್ದಾರೆ.
75 ವರ್ಷ ತುಂಬಿದ ಜನಪ್ರಿಯ ಕವಿ ಡಾ.ಜಿ.ಎಸ್. ಶಿವರುದ್ರಪ್ಪನವರಿಗೆ ಬೆಂಗಳೂರು ಪದವಿ ಕಾಲೇಜು ಕನ್ನಡ ಅಧ್ಯಾಪಕರ ಒಕ್ಕೂಟ ಏರ್ಪಡಿಸಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಎಸ್‌ಎಸ್ ಮಾತನಾಡುತ್ತಿದ್ದರು. ಅಧ್ಯಾಪಕರು ನೈತಿಕ ಸ್ಥೈರ್ಯ ಕಳೆದುಕೊಳ್ಳುತ್ತಿರುವುದರಿಂದ ಅಧ್ಯಾಪನ ಕ್ರಿಯೆ ಸತ್ತು ಹೋಗುತ್ತಿದೆ. ಇದರಿಂದ ಉತ್ತಮ ಸಮಾಜದ ನಿರ್ಮಾಣ ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ತಮಿಳು, ತೆಲುಗು ಹಾಗೂ ಹಿಂದಿ ಅಧ್ಯಯನ ಪೀಠಗಳ ಸ್ಥಾಪನೆಯಲ್ಲಿ ಶಿವರುದ್ರಪ್ಪನವರ ಪಾತ್ರ ದೊಡ್ಡದು. ಉನ್ನತ ಹುದ್ದೆಗಳಿಗೂ ಆಸೆ ಪಡದೆ ಜ್ಞಾನದಾಹ ಹಾಗೂ ಜ್ಞಾನ ನಮ್ರತೆಯನ್ನು ಮೈಗೂಡಿಸಿಕೊಂಡ ಶಿವರುದ್ರಪ್ಪನವರನ್ನು ಪ್ರಸ್ತುತದ ಸಂದಿಗ್ಧ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಅರ್ಥಪೂರ್ಣ ಎಂದು ಜಿಎಸ್‌ಎಸ್ ಬಣ್ಣಿಸಿದರು.
ನಿವೃತ್ತ ನ್ಯಾಯಮೂರ್ತಿ ನಿಟ್ಟೂರು ಶ್ರೀನಿವಾಸರಾವ್ ಗೌರವ ಕೃತಿ ಬಿಡುಗಡೆ ಮಾಡಿದರು. ಶೂದ್ರ ಶ್ರೀನಿವಾಸ್, ಟಿ.ಎಸ್. ದಕ್ಷಿಣಾಮೂರ್ತಿ, ಅಗ್ರಹಾರ ಕೃಷ್ಣಮೂರ್ತಿ ಅವರುಗಳು ಶಿವರುದ್ರಪ್ಪನವರ ಗುಣಗಾನ ಮಾಡಿದರು. ಕಾರ್ಯಕ್ರಮದ ಅಂಗವಾಗಿ ಕವಿಗೋಷ್ಠಿ ಹಾಗೂ ವಿಚಾರ ಸಂಕಿರಣಗಳೂ ನಡೆದವು. ಆದರೆ ಇಷ್ಟೆಲ್ಲಾ ಸಂಭ್ರಮಕ್ಕೆ ಕಾರಣರಾದ ಡಾ.ಜಿ.ಎಸ್. ಶಿವರುದ್ರಪ್ಪ ಕಾರ್ಯಕ್ರಮದಲ್ಲಿ ಹಾಜರಿರಲಿಲ್ಲ .
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications