ರೈಲ್ವೆ ಇಲಾಖೆಗೆ ಸಂಪನ್ಮೂಲ ಕೊರತೆ, ಪ್ರಯಾಣ ದರ ಹೆಚ್ಚಳ ?
ರಾಜ್ ನಂದಗಾಂನ್(ಚತ್ತೀಸ್ಗಢ) : ಸಂಪನ್ಮೂಲಗಳ ಕೊರತೆಯನ್ನು ನಿಭಾಯಿಸುವುದು ರೈಲ್ವೇ ಇಲಾಖೆಗೆ ದೊಡ್ಡ ಹೊರೆಯಾಗಿದೆ ಎಂದು ಹೇಳಿರುವ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ದಿಗ್ವಿಜಯ್ ಸಿಂಗ್, ಸದ್ಯದಲ್ಲೇ ರೈಲ್ವೇ ಪ್ರಯಾಣ ದರ ಹೆಚ್ಚಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ರೈಲ್ವೆ ಸಂಪರ್ಕ ಜಾಲ ಅಭಿವೃದ್ಧಿ ಯೋಜನೆಗಳಲ್ಲಿ ಎಲ್ಲ ರಾಜ್ಯಗಳೂ ಭಾಗಿಯಾಗಬೇಕೆಂದು ಸುದ್ದಿಗೋಷ್ಠಿಯಲ್ಲಿ ಮಾತನಾಡ್ತುತಿದ್ದ ದಿಗ್ವಿಜಯ್ ಸಿಂಗ್ ಮನವಿ ಮಾಡಿದರು. ಪ್ರಸ್ತುತ ತನ್ನೆಲ್ಲ ಯೋಜನೆಗಳ ಜಾರಿಗಾಗಿ ಇಲಾಖೆಗೆ 50 ಸಾವಿರ ಕೋಟಿ ರುಪಾಯಿ ಬೇಕಾಗಿದೆ. ಹೊಸ ರೈಲ್ವೆ ಮಾರ್ಗಗಳ ನಿರ್ಮಾಣಕ್ಕಾಗಿ 20 ಸಾವಿರ ಕೋಟಿ ರು. ಹಾಗೂ ರೈಲ್ವೆ ಹಳಿಗಳನ್ನು ಅಗಲಗೊಳಿಸುವ ಯೋಜನೆಗಳಿಗಾಗಿ 10 ಸಾವಿರ ಕೋಟಿ ರು. ಅಗತ್ಯವಿದೆ ಎಂದು ಅವರು ಹೇಳಿದರು.
ಇಲಾಖೆಯ ಮುಂದಿನ ಯೋಜನೆಗಳು ಬೆಟ್ಟದಷ್ಟಿದ್ದರೂ, ಬಜೆಟ್ನ ಬೆಂಬಲ ಕೇವಲ 1 ಸಾವಿರದ 400 ಕೋಟಿ ರುಪಾಯಿ ಮಾತ್ರ. ಈ ರೀತಿಯ ಬೆಂಬಲದಲ್ಲಿ , ನಮ್ಮ ಯೋಜನೆಗಳನ್ನು 25- 30 ವರ್ಷಗಳಲ್ಲಿ ಪೂರೈಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಹೆಣಗುತ್ತಿರುವ ಇಲಾಖೆ, ಅಭಿವೃದ್ಧಿ ಕಾರ್ಯಗಳಲ್ಲಿ ಭಾಗವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಪತ್ರ ಬರೆದಿದೆ ಎಂದು ಸಚಿವರು ತಿಳಿಸಿದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications