9 ಭಾರತೀಯ ಅಮೇರಿಕನ್ ವಿದ್ಯಾರ್ಥಿಗಳಿಗೆ ರಾಷ್ಟ್ರಪತಿ ಪುರಸ್ಕಾರ
ನ್ಯೂಯಾರ್ಕ್ : ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಭಿನ್ನ ಸಾಧನೆಯಿಂದ ಗುರ್ತಿಸಿಕೊಂಡಿರುವ 9 ಮಂದಿ ಭಾರತೀಯ ಅಮೆರಿಕನ್ ವಿದ್ಯಾರ್ಥಿಗಳಿಗೆ 2001 ಸಾಲಿನ ರಾಷ್ಟ್ರಪತಿಗಳ ಪುರಸ್ಕಾರವನ್ನು ಪ್ರಕಟಿಸಲಾಗಿದೆ. ಈ ಪುರಸ್ಕಾರ ಪಡೆದವರಲ್ಲಿ ಇಬ್ಬರು ಬಾಂಗ್ಲಾ ದೇಶೀಯರು ಸೇರಿದ್ದಾರೆ.
ಯುಎಸ್ ಶಿಕ್ಷಣ ಕಾರ್ಯದರ್ಶಿ ರಾಡ್ ಪೈಗೆ ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗುತ್ತಿರುವ ಒಟ್ಟು 141 ಮಂದಿಯ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಬಹುಮಾನಿತ ವಿದ್ಯಾರ್ಥಿಗಳು ವಾಷಿಂಗ್ಟನ್‌ಗೆ ಬಂದುಹೋಗುವ ಎಲ್ಲ ವೆಚ್ಚವನ್ನು ಆಡಳಿತ ಭರಿಸುವುದು.
ಜೂನ್ 23 ರಿಂದ ಪ್ರಾರಂಭವಾಗುವ ವಾರದಲ್ಲಿ ವೈಟ್‌ಹೌಸ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರತಿಯಾಬ್ಬ ಪುರಸ್ಕೃತನಿಗೂ ರಾಷ್ಟ್ರಪತಿಗಳ ಪದಕವನ್ನು ನೀಡಿ ಗೌರವಿಸಲಾಗುವುದು. ಅತ್ಯಂತ ಪ್ರತಿಷ್ಟಿತ ಪ್ರಶಸ್ತಿಯೆಂದು ಬಣ್ಣಿಸಲಾಗುವ ಈ ಪುರಸ್ಕಾರ- ಪ್ರೌಢಶಾಲಾ ಶಿಕ್ಷಣದಲ್ಲಿ ನೀಡುವ ದೇಶದ ಸರ್ವೋಚ್ಛ ಗೌರವವಾಗಿದೆ.
ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ತೋರಿರುವ ಈ ವಿದ್ಯಾರ್ಥಿಗಳು ಶಿಕ್ಷಣ ಮಾತ್ರವಲ್ಲದೆ ಇತರ ಚಟುವಟಿಕೆಗಳಲ್ಲೂ ಅತ್ಯುತ್ತಮ ಸಾಧನೆ ಹೊಂದಿದ್ದಾರೆ ಎಂದು ರೋಡ್ ಅವರು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬಣ್ಣಿಸಲಾಗಿದೆ. ಅಮೇರಿಕಾದ ಅಧ್ಯಕ್ಷರು ನೇಮಕ ಮಾಡುವ ಸಮಿತಿಯು ರಾಷ್ಟ್ರಪತಿಗಳ ಪುರಸ್ಕಾರಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುತ್ತದೆ. ಈ ಆಯ್ಕೆ ಸಮಿತಿಯಲ್ಲಿ ಕಾನೂನು, ವೈದ್ಯಕೀಯ, ವಾಣಿಜ್ಯ ಮುಂತಾದ ಕ್ಷೇತ್ರಗಳ ಪ್ರತಿನಿಧಿಗಳು ಮಾತ್ರವಲ್ಲದೆ, ಸರ್ಕಾರದ ಪ್ರತಿನಿಧಿಗಳೂ ಇರುವರು.
ವಿದ್ಯಾರ್ಥಿಗಳ ಶೈಕ್ಷಣಿಕ ಬುದ್ಧಿ ಮತ್ತೆ ಮಾತ್ರವಲ್ಲದೆ- ನಾಯಕತ್ವ ಗುಣಗಳು, ಆದರ್ಶಗಳ ಬಗೆಗಿನ ಬದ್ಧತೆಯನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡುವಲ್ಲಿ ಪರಿಗಣಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ತಮ್ಮ ಮೇಲೆ ಅತ್ಯಂತ ಪ್ರಭಾವ ಬೀರಿದ ಶಿಕ್ಷಕರೆಂದು ಹೆಸರಿಸುವ ಶಿಕ್ಷಕರನ್ನು ಕೂಡ ವೈಟ್‌ಹೌಸ್‌ನ ಸಮಾರಂಭದಲ್ಲಿ ಗೌರವಿಸಲಾಗುತ್ತದೆ.
(ಐಎಎನ್‌ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications