ವಿದ್ವಾನ್ ಎನ್.ರಂಗನಾಥ ಶರ್ಮರಿಗೆಸೇಡಿಯಾಪು ಪ್ರಶಸ್ತಿ
ವಿಟ್ಲ : ಬೆಂಗಳೂರಿನ ಕನ್ನಡ- ಸಂಸ್ಕೃತ ಭಾಷಾ ವಿದ್ವಾಂಸ ಎನ್.ರಂಗನಾಥ ಶರ್ಮ ಅವರು ಈ ವರ್ಷದ ಸೇಡಿಯಾಪು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇಲ್ಲಿನ ಪದವಿಪೂರ್ವ ಕಾಲೇಜಿನಲ್ಲಿ ಜೂನ್ 8ರಂದು ನಡೆಯಲಿರುವ ಸೇಡಿಯಾಪು ಕೃಷ್ಣ ಭಟ್ ಅವರ ಜನ್ಮ ಶತಮಾನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆ, ರಂಗನಾಥ ಶರ್ಮರಿಗೆ ಸೇಡಿಯಾಪು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೇಡಿಯಾಪು ಕೃಷ್ಣ ಭಟ್ ಜನ್ಮ ಶತಮಾನೋತ್ಸವ ಕೇಂದ್ರ ಸಮಿತಿಯ ಉಡುಪಿ ಕಾರ್ಯಾಧ್ಯಕ್ಷ ಹಾಗೂ ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಏರ್ಯ ಲಕ್ಷ್ಮೀನಾರಾಯಣ ಆಳ್ವ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಕವಿ, ವಿಮರ್ಶಕ, ವಿದ್ವಾಂಸ ಸೇಡಿಯಾಪು ಕೃಷ್ಣ ಭಟ್ ಅವರ ಜನ್ಮ ಶತಮಾನೋತ್ಸವವು ವಿಟ್ಲದಲ್ಲಿ ಜೂನ್ 8ರಂದು ಉದ್ಘಾಟನೆಯಾಗಿ, 2002ನೇ ಜೂನ್ 8ಕ್ಕೆ ಉಡುಪಿಯ ಎಂ.ಜಿ.ಎಂ.ಕಾಲೇಜಿನಲ್ಲಿ ಸಮಾರೋಪಗೊಳ್ಳಲಿದೆ. ವಿವಿಧ ಕಾರ್ಯಕ್ರಮಗಳೊಡನೆ ದೇಶಾದ್ಯಂತ ಈ ಉತ್ಸವ ನಡೆಯಲಿದೆ.
ಡಾ.ವೀರೇಂದ್ರ ಹೆಗಡೆ ಸಮಾರಂಭ ಉದ್ಘಾಟಿಸುವರು. ಸೇಡಿಯಾಪು ಸ್ಮಾರಕ ಕುರಿತಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಜೆ.ಲಕ್ಕಪ್ಪ ಗೌಡ ವಿಶೇಷ ಉಪನ್ಯಾಸ ಮಾಡುವರು. ಇದೇ ಸಂದರ್ಭದಲ್ಲಿ ಡಾ.ಪಾದೇಕಲ್ಲು ವಿಷ್ಣುಭಟ್ ಬರೆದಿರುವ ‘ಸೇಡಿಯಾಪು’ ಕೃತಿಯನ್ನು ಮಂಗಳೂರು ವಿವಿ ಕುಲಪತಿ ಡಾ.ಎಸ್.ಗೋಪಾಲ್ ಬಿಡುಗಡೆ ಮಾಡುವರು. ನಂತರ ಶತಾವಧಾನಿ ಆರ್.ಗಣೇಶ್, ‘ಪಂಡಿತ ಪರಮೇಷ್ಠಿಗಳು- ರಸ ಪ್ರಸಂಗಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ಮಾಡುವರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಉಂಟು.
(ಮಂಗಳೂರು ಪ್ರತಿನಿಧಿಯಿಂದ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications