ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಿಂಗ್ ಕೋಬ್ರಾ ಪ್ರತ್ಯಕ್ಷ!
ಬೆಂಗಳೂರು : ಇಲ್ಲಿನ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಬುಧವಾರ ಅನಿರೀಕ್ಷಿತ ಅತಿಥಿಯನ್ನು ಎದುರುಗೊಂಡ ಅಚ್ಚರಿ. ಜೋರ್ಡಾನ್ನ ವಿದ್ಯಾರ್ಥಿಯ ತಪಾಸಣೆಯ ಸಂದರ್ಭದಲ್ಲಿ , ಆತನ ಬ್ಯಾಗ್ನಲ್ಲಿ ನ ವಸ್ತುವಿನ ಬಗೆಗೆ ಕುತೂಹಲಗೊಂಡ ಅಧಿಕಾರಿಗಳು ತಪಾಸಣೆ ನಡೆಸಿದಾಗ ಎದುರಾದದ್ದು - ಕಿಂಗ್ ಕೋಬ್ರಾ. ಅರೆಗಳಿಗೆ ಅಧಿಕಾರಿಗಳಿಗೆ ಉಸಿರುಗಟ್ಟಿದ ಅನುಭವ.
ಮೈಸೂರಿನಲ್ಲಿ ಓದುತ್ತಿರುವ ಜೋರ್ಡಾನ್ನ ವಾಸಿಂ ಎನ್ನುವ ಯುವಕ, ಬುಧವಾರ ಷಾರ್ಜಾಕ್ಕೆ ತೆರಳುವ ವಿಮಾನ ಪ್ರವೇಶಿಸುವ ಸಂದರ್ಭದಲ್ಲಿ ನ ತಪಾಸಣೆಯಲ್ಲಿ ಕಿಂಗ್ ಕೋಬ್ರಾ ಪತ್ತೆಯಾಯಿತು. ವಾಸಿಂನ ಬ್ಯಾಗ್ನಲ್ಲಿ ಯಾವುದೋ ಚಲಿಸುವ ವಸ್ತು ಇರುವುದನ್ನು ಎಕ್ಸರೇ ಸ್ಕ್ಯಾನರ್ ಯಂತ್ರ ತೋರಿಸಿದಾಗ, ಕೇಂದ್ರ ಸುರಕ್ಷತಾ ಪಡೆಯ ಸಿಬ್ಬಂದಿ ಜಾಗರೂಕರಾದರು. ಪರಿಶೀಲನೆಯಲ್ಲಿ ದೊರೆತದ್ದು ಹಾವು. ಕಿಂಗ್ ಕೋಬ್ರಾನ ವಿಷದ ಹಲ್ಲುಗಳನ್ನು ಕಿತ್ತು ಹಾಕಲಾಗಿದೆ. ಈ ವಿಷಯವನ್ನು ವಿಮಾನ ನಿಲ್ದಾಣದ ಪೊಲೀಸ್ ಮೂಲಗಳು ತಿಳಿಸಿವೆ.
ಮುದ್ದು (ಸಾಕು)ಪ್ರಾಣಿಯನ್ನಾಗಿ ಇರಿಸಿಕೊಳ್ಳಲು ಕೋಬ್ರಾ ತೆಗೆದುಕೊಂಡು ಹೋಗುತ್ತಿರುವುದಾಗಿ ವಾಸಿಂ ಪೊಲೀಸರಿಗೆ ತಿಳಿಸಿದ್ದಾನೆ. ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡಿರುವ ಪೊಲೀಸರು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications