Get Updates
Get notified of breaking news, exclusive insights, and must-see stories!

ಹುಣಸೂರು ಬಳಿ ಉರುಳಿಬಿದ್ದ ದಿಬ್ಬಣದ ಲಾರಿ, ಓರ್ವನ ಸಾವು

ಮೈಸೂರು : ಮದುವೆ ದಿಬ್ಬಣದವರನ್ನು ಹೊತ್ತೊಯ್ಯುತ್ತಿದ್ದ ಲಾರಿ ಜಿಲ್ಲೆಯ ಹುಣಸೂರು ತಾಲ್ಲೂಕಿನ ಬಿಳಿಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ಉರುಳಿಬಿದ್ದಿದ್ದು , ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇತರ 30 ಮಂದಿ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದಾರೆ.

ಪಿರಿಯಾಪಟ್ಟಣದಿಂದ ಮೈಸೂರಿಗೆ ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು ಲಕ್ಷ್ಮಿ ಚಿತ್ರಮಂದಿರದ ಬೈಪಾಸ್‌ ರಸ್ತೆಯಲ್ಲಿ ಗುರುವಾರ 11 ರ ಸುಮಾರಿಗೆ ಉರುಳಿಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಯಿತಾದರೂ ಆತ ಬದುಕುಳಿಯಲಿಲ್ಲ .

ಅಪಘಾತದಲ್ಲಿ ಗಾಯಗೊಂಡವರು ಮೈಸೂರಿನ ಕೆ.ಆರ್‌. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಳಿಕೆರೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು , ಮುಂದಿನ ತನಿಖೆ ನಡೆಸುತ್ತಿದ್ದಾರೆ.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+