ವೀರಪ್ಪನ್ ಶಿಕಾರಿ : ತಮಿಳುನಾಡು ಎಸ್ಟಿಎಫ್ ಮುಖ್ಯಸ್ಥರಾಗಿ ದ್ಯಾವರಂ
ಚೆನ್ನೈ : ನರಹಂತಕ ವೀರಪ್ಪನ್ ಶಿಕಾರಿಯಲ್ಲಿ ತೊಡಗಿರುವ ತಮಿಳುನಾಡು ಕಾರ್ಯಾಚರಣೆ ಪಡೆಯ ಮುಖ್ಯಸ್ಥರನ್ನಾಗಿ ತಮಿಳುನಾಡಿನ ಮಾಜಿ ಪೊಲೀಸ್ ಮಹಾ ನಿರ್ದೇಶಕ ಡಬ್ಲ್ಯೂ.ಐ. ದ್ಯಾವರಂ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಜಯಲಲಿತಾ ಶುಕ್ರವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದ್ದಾರೆ.
ದ್ಯಾವರಂ ಅವರನ್ನು ತಮಿಳುನಾಡು- ಕರ್ನಾಟಕ ಉಭಯ ರಾಜ್ಯಗಳ ಜಂಟಿ ಕಾರ್ಯಾಚರಣೆ ಪಡೆಯ ಮುಖ್ಯಸ್ಥರನ್ನಾಗಿಯೂ ನೇಮಿಸಲು ಉದ್ದೇಶಿಸಲಾಗಿದ್ದು, ಈ ಕುರಿತಂತೆ ಸದ್ಯದಲ್ಲೇ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಜಯಲಲಿತಾ ಹೇಳಿದರು. ಗಡಿ ಭದ್ರತಾ ಪಡೆಯ ಕೆ. ವಿಜಯ ಕುಮಾರ್ ಅವರನ್ನು ದೇವರಂ ಅವರಿಗೆ ಸಹಾಯಕರನ್ನಾಗಿ ನೇಮಿಸಲು ಉದ್ದೇಶಿಸಿರುವುದಾಗಿಯೂ ಅವರು ಹೇಳಿದರು.
ಈವರೆಗೆ ವೀರಪ್ಪನ್ ಕಾರ್ಯಾಚರಣೆ ಪಡೆಯ ನೇತೃತ್ವ ವಹಿಸಿದ್ದ ಎಲ್ಲ ಅಧಿಕಾರಿಗಳಿಗಳಿಗಿಂತ ದ್ಯಾವರಂ ಅವರು ಹಿರಿಯ ಅಧಿಕಾರಿಯಾಗಿದ್ದಾರೆ ಎಂದು ಅವರ ನೇಮಕಕ್ಕೆ ಜಯಲಲಿತಾ ಕಾರಣ ನೀಡಿದರು. ತಮ್ಮನ್ನು ಉಭಯ ರಾಜ್ಯಗಳ ಎಸ್ಟಿಎಫ್ ಮುಖ್ಯಸ್ಥರನ್ನಾಗಿ ನೇಮಿಸಿದಲ್ಲಿ ವೀರಪ್ಪನ್ ಶಿಕಾರಿಯಲ್ಲಿ ಯಶಸ್ವಿಯಾಗಿಯೇ ತೀರುವುದಾಗಿ ಈ ಮುನ್ನ ದ್ಯಾವರಂ ಹೇಳಿಕೊಂಡಿದ್ದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications