ಸಂಶೋಧನೆಗಳ ಬಗ್ಗೆ ವಿಶ್ವ ವಿದ್ಯಾಲಯಗಳ ಅಲಕ್ಷ್ಯ- ವೀರೇಂದ್ರ ಹೆಗ್ಗಡೆ
ಮಂಗಳೂರು : ಸಂಶೋಧನಾ ಕೇಂದ್ರಗಳಾಗಿ ಬೆಳೆಯಬೇಕಾದ ವಿಶ್ವ ವಿದ್ಯಾಲಯಗಳು ಪದವಿ ಪ್ರದಾನ ಕೇಂದ್ರಗಳಾಗಿ ಬೆಳೆಯುತ್ತಿರುವ ಬಗೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ವಿಷಾದ ವ್ಯಕ್ತಪಡಿಸಿದ್ದಾರೆ.
ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ, ಡಾ. ವಾಮನ ನಂದಾವರ ಅವರ ಕೋಟಿ ಚೆನ್ನಯ್ಯ ಜಾನಪದೀಯ ಅಧ್ಯಯನ ಗ್ರಂಥವನ್ನು ಬಿಡುಗಡೆಗೊಳಿಸಿ ವೀರೇಂದ್ರ ಹೆಗ್ಗಡೆ ಮಾತನಾಡುತ್ತಿದ್ದರು. ಇಂದಿನ ದಿನಗಳಲ್ಲಿ ಅಧ್ಯಯನಶೀಲತೆ ಕಡಿಮೆಯಾಗುತ್ತಿದೆ. ಸಂಶೋಧನೆಯ ಹಿಂದಿನ ಶ್ರಮವನ್ನು ನಾವು ಮರೆಯುತ್ತಿದ್ದೇವೆ. ಡಿಗ್ರಿ ಪ್ರದಾನ ಮಾಡುವ ಕೇಂದ್ರಗಳಾಗಿರುವ ವಿಶ್ವವಿದ್ಯಾಲಯಗಳು ಸಂಶೋಧನೆಗಳನ್ನು ಮರೆಯುತ್ತಿವೆ ಎಂದು ಅವರು ವಿಷಾದಿಸಿದರು.
ವಾಮನ ನಂದಾವರ ಕೃತಿಯನ್ನು ಸಂಗ್ರಹ ಯೋಗ್ಯ ಅದ್ಭುತ ಗ್ರಂಥ ಎಂದು ಬಣ್ಣಿಸಿದ ಅವರು, ಗ್ರಾಮೀಣ ಪ್ರದೇಶದ ನಂಬಿಕೆಗಳು, ಭೂತಾರಾದನೆ, ಸಾಂದರ್ಭಿಕ ಸತ್ಯ, ಕೋಟಿ ಚೆನ್ನಯ್ಯರ ನಡೆನುಡಿ ಅವರ ಸ್ವಭಾವಗಳು ಕೃತಿಯಲ್ಲಿ ಸೊಗಸಾಗಿ ಮೂಡಿಬಂದಿವೆ ಎಂದರು. ಪ್ರಾಪಂಚಿಕ ವ್ಯವಹಾರಗಳಿಗೆ ದೈವಗಳು ಅಗತ್ಯ ಎನ್ನುವುದನ್ನು ವೀರೇಂದ್ರ ಹೆಗ್ಗಡೆ ಒತ್ತಿ ಹೇಳಿದರು.
ಮಂಗಳೂರು ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಎ. ವಿವೇಕ ರೈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೃತಿ ಸಮೀಕ್ಷೆಯನ್ನು ನಿವೃತ್ತ ಪ್ರಾಧ್ಯಾಪಕ ಡಾ.ಸಿ. ಎನ್. ರಾಮಚಂದ್ರನ್ ನಡೆಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಅ. ಬಾಲಕೃಷ್ಣ ಶೆಟ್ಟಿ ಪೊಳಲಿ ಹಾಗೂ ಅಕಾಡೆಮಿ ಸದಸ್ಯ ದಾಮೋದರ ನಿಸರ್ಗ, ಕೃತಿಕಾರ ವಾಮನ ನಂದಾವರ, ತುಳು ಅಕಾಡೆಮಿ ರಿಜಿಸ್ಟ್ರಾರ್ ಎಸ್.ಎಚ್.ಶಿವರುದ್ರಪ್ಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಂಗವಾಗಿ ನಡೆದ ಕೋಟಿ ಚೆನ್ನಯ್ಯ ಒಂದು ಸಂವಾದ ಕಾರ್ಯಕ್ರಮವನ್ನು ಹಿರಿಯ ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಉದ್ಘಾಟಿಸಿದರು.
(ಮಂಗಳೂರು ಪ್ರತಿನಿಧಿಯಿಂದ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications