ರೋರಿಚ್ ಸ್ಮರಣಿಕೆ ರಕ್ಷಣೆ : ಪ್ರಧಾನಿ ಕ್ರಮಕ್ಕೆ ರಷ್ಯಾ ಶ್ಲಾಘನೆ
ಮಾಸ್ಕೋ : ವಿಶ್ವ ಪ್ರಸಿದ್ಧ ಅಂತರರಾಷ್ಟ್ರೀಯ ರೋರಿಚ್ ಟ್ರಸ್ಟ್ ಸಂರಕ್ಷಣೆಗಾಗಿ ಭಾರತದ ಪ್ರಧಾನಿ ವಾಜಪೇಯಿ ಅವರು 2 ಲಕ್ಷ ಡಾಲರ್ ಅನುದಾನ ಬಿಡುಗಡೆ ಮಾಡಿರುವ ಬಗ್ಗೆ ರಷ್ಯಾದ ವಿದೇಶಾಂಗ ಸಚಿವಾಲಯ ತೃಪ್ತಿ ವ್ಯಕ್ತಪಡಿಸಿದೆ.
ಭಾರತದಲ್ಲಿರುವ ರೋರಿಚ್ ಕುಟುಂಬದ ಅಮೂಲ್ಯ ಸ್ಮರಣಿಕೆಗಳ ರಕ್ಷಣೆಗಾಗಿ ಈ ಅನುದಾನವನ್ನು ವಾಜಪೇಯಿ ಬಿಡುಗಡೆ ಮಾಡಿದ್ದಾರೆ. ರೋರಿಚ್ ಅವರ ಕುಟುಂಬದ ಸಂಪನ್ಮೂಲ ಭಾರತ ಹಾಗೂ ರಷ್ಯಾಗಳ ನಡುವಣ ಸಾಂಸ್ಕೃತಿಕ ವಿನಿಮಯಕ್ಕೆ ಸಾಕ್ಷಿಯಾಗಿದೆ ಎಂದು ರಷ್ಯಾ ವಿದೇಶಾಂಗ ಸಚಿವಾಲಯದ ಪ್ರಕಟಣೆ ಬಣ್ಣಿಸಿದೆ.
ಕುಲುವಿನಲ್ಲಿ ರೋರಿಚ್ ಅವರ ಸ್ಮರಣಾರ್ಥವಾಗಿ ಉಳಿದಿರುವ ಎಸ್ಟೆಟನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಬಳಕೆಯಾಗುವುದು. ಈ ಎಸ್ಟೇಟನ್ನು ಅಂತರರಾಷ್ಟ್ರೀಯ ಸಾಂಸ್ಕೃತಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗುವುದು.
1920 ರ ಸುಮಾರಿಗೆ ಭಾರತಕ್ಕೆ ಬಂದು ನೆಲೆಸಿದ ನಿಕೋಲಸ್ ರೋರಿಚ್ (1874- 1947) ವಿಖ್ಯಾತ ಚಿತ್ರಕಾರ, ಲೇಖಕ ಹಾಗೂ ಆರ್ಕಿಯಾಲಜಿಸ್ಟ್ . ಭಾರತ ಹಾಗೂ ಟಿಬೆಟ್ಟಿನ ಸಂಸ್ಕೃತಿಯ ಅಧ್ಯಯನ ನಡೆಸಿದ ರೋರಿಚ್, ಸಮುದಾಯ ಕಾರ್ಯ ಹಾಗೂ ಸಾಂಸ್ಕೃತಿಕ ಸ್ಮರಣಿಕೆಗಳ ಸಂರಕ್ಷಣೆಯಲ್ಲಿ ಗಮನಾರ್ಹ ದುಡಿಮೆ ಮಾಡಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications