ಪೇಜಾವರ ಮಠಾಧೀಶ ವಿಶ್ವೇಶತೀರ್ಥರಿಗೆ ‘ವೆ’ೖ ದರ್ಜೆ ರಕ್ಷಣೆ
ಉಡುಪಿ : ಇನ್ನುಮುಂದೆ ಪೇಜಾವರ ಮಠಾಧೀಶರನ್ನು ಸುಲಭವಾಗಿ ನೋಡುವಂತಿಲ್ಲ . ಅವರೀಗ ಭದ್ರತಾ ಸಿಬ್ಬಂದಿಯ ಬಂಧಿ. ಅರ್ಥಾತ್, ಜೀವ ಬೆದರಿಕೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿಯ ಪೇಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿ ಅವರಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆ ವೈ ದರ್ಜೆಯ ರಕ್ಷಣೆ ನೀಡಿದೆ.
ಇತ್ತೀಚಿನ ದಿನಗಳಲ್ಲಿ ಅನೇಕ ಮಠಾಧೀಶರ ಮೇಲೆ ಹಲ್ಲೆಗಳು ನಡೆದಿರುವ ಉದಾಹರಣೆಗಳ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥರಿಗೆ ರಕ್ಷಣೆ ನೀಡಲಾಗಿದೆ. ಈಗಾಗಲೇ ಭದ್ರತಾ ಸಿಬ್ಬಂದಿ ಸ್ವಾಮೀಜಿಯವರ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯಾಬ್ಬರು ಶುಕ್ರವಾರ ತಿಳಿಸಿದ್ದಾರೆ.
ರಕ್ಷಣೆ ನಾವಾಗಿಯೇ ಕೇಳಿದ್ದಲ್ಲ : ಪೊಲೀಸ್ ರಕ್ಷಣೆಯನ್ನು ನಾವಾಗಿಯೇ ಕೇಳಿದ್ದಲ್ಲ . ಅವರಾಗಿಯೇ ಕೊಟ್ಟಿದ್ದಾರೆ. ಅವರ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ತಮಗೆ ಒದಗಿಸಿರುವ ರಕ್ಷಣೆಯ ಕುರಿತು ವಿಶ್ವೇಶತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕೆಲವು ತಿಂಗಳ ಹಿಂದೆ ಬಂದ ಅನಾಮಧೇಯ ಪತ್ರದ ಬೆದರಿಕೆಯ ಹಿನ್ನೆಲೆಯಲ್ಲಿ ಸ್ವಾಮೀಜಿಯವರಿಗೆ ರಕ್ಷಣೆ ನೀಡಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications