ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣಮೀಸಲಾತಿ ವಿಸ್ತರಣೆ
ಬೆಂಗಳೂರು : ಕನ್ನಡ ಮಾಧ್ಯಮದಲ್ಲಿ 1 ರಿಂದ 10 ನೇ ತರಗತಿಯವರೆಗೆ ಕಲಿತ ವಿದ್ಯಾರ್ಥಿಗಳಿಗೆ ಉನ್ನತ ವೃತ್ತಿ ಶಿಕ್ಷಣದಲ್ಲಿ ನೀಡಿರುವ ಪ್ರತಿಶತಃ 5 ರ ಮೀಸಲಾತಿಯನ್ನು ಪಾಲಿಟೆಕ್ನಿಕ್, ಬಿ.ಇಡಿ, ಎಂ.ಇಡಿ, ಬಿ.ಪಿ.ಇಡಿ, ಎಂ.ಪಿ.ಇಡಿ ಮುಂತಾದ ವೃತ್ತಿ ಕೋರ್ಸ್‌ಗಳಿಗೂ ವಿಸ್ತರಿಸಲು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿರ್ಧರಿಸಿದ್ದಾರೆ.
ಮೇ ತಿಂಗಳ 19 ರಂದು ಸಭೆ ಸೇರಿದ್ದ ರಾಜ್ಯ ಸಚಿವ ಸಂಪುಟ- ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಪ್ರವೇಶಕ್ಕೆ ಮಾತ್ರ ಶೇ.5 ರ ಮೀಸಲಾತಿ ನೀಡಲು ತೀರ್ಮಾನಿಸಿತ್ತು . ಸಂಪುಟದ ಈ ನಿರ್ಧಾರ ಅಪೂರ್ಣವಾಗಿದ್ದು , ಇತರ ವೃತ್ತಿ ಶಿಕ್ಷಣ ಕೋರ್ಸ್‌ಗಳಿಂದ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ವಂಚಿತರಾಗುತ್ತಾರೆ ಎನ್ನುವ ಸೊಲ್ಲು ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮೀಸಲಾತಿ ವಿಸ್ತರಣೆಯ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಧಾನಸಭೆ ಮೊಗಸಾಲೆಯ ಉನ್ನತ ಮೂಲಗಳು ತಿಳಿಸಿವೆ.
ಮೀಸಲಾತಿ ವಿಸ್ತರಣೆಯ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬರಗೂರು ರಾಮಚಂದ್ರಪ್ಪ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದ್ದು - ಅದರಲ್ಲಿ ಎಲ್ಲ ಸ್ನಾತಕೋತ್ತರ ಪದವಿಗಳಿಗೂ ಮೀಸಲಾತಿ ಸವಲತ್ತನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿತ್ತು .
ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿದ್ದ ‘ಶಿಕ್ಷಣದಲ್ಲಿ ಮಾಧ್ಯಮ’ ಎನ್ನುವ ವರದಿಯಲ್ಲೂ 1 ರಿಂದ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒತ್ತಾಯಿಸಲಾಗಿತ್ತು . ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮೀಸಲಾತಿ ವಿಸ್ತರಣೆ ನಿರ್ಣಯವನ್ನು ಕೈಗೊಂಡಿದ್ದಾರೆ ಎಂದು ವಿಶ್ಲೇಷಿಸಲಾಗಿದೆ. ಆದರೆ, ಈ ಮೀಸಲಾತಿ ವಿಸ್ತರಣೆ ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿಗೆ ಅನ್ವಯಿಸುವ ಬಗ್ಗೆ ಯಾವುದೇ ವಿಷಯ ತಿಳಿದು ಬಂದಿಲ್ಲ.
(ಇನ್ಫೋ ವಾರ್ತೆ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications