ಪ್ರಶಸ್ತಿ ಸಂಖ್ಯೆ ಹೆಚ್ಚಿದರೆ, ಪ್ರಶಸ್ತಿ ಪಡೆವ ಹುಚ್ಚೂ ಹೆಚ್ಚತ್ತೆ : ಭಟ್
ಬೆಂಗಳೂರು : ಪ್ರಶಸ್ತಿಗಳ ಸಂಖ್ಯೆ ಹೆಚ್ಚಿದಂತೆಲ್ಲ ಅದನ್ನು ಪಡೆಯುವ ಹುಚ್ಚೂ ಸಮಾಜದಲ್ಲಿ ಹೆಚ್ಚುತ್ತದೆ ಎಂದು ಕವಿ ಪ್ರೊ. ಲಕ್ಷ್ಮೀನಾರಾಯಣ ಭಟ್ ಅಭಿಪ್ರಾಯಪಟ್ಟಿದ್ದಾರೆ. ಈ ಕಾರಣದಿಂದ ಪ್ರಶಸ್ತಿಗಳ ಸಂಖ್ಯೆ ಸೀಮಿತವಾಗಿರಬೇಕು ಎಂದೂ ಅವರು ಪ್ರತಿಪಾದಿಸಿದ್ದಾರೆ.
ಭಾನುವಾರ ಬೆಂಗಳೂರಿನಲ್ಲಿ ಡಿ.ವಿ.ಜಿ. ವೇದಿಕೆ ಏರ್ಪಡಿಸಿದ್ದ ಡಿ.ವಿ.ಜಿ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡುತ್ತಿದ್ದ ಅವರು, ಪ್ರಶಸ್ತಿಗಳನ್ನು ಕೇವಲ ವಯಸ್ಸಾದವರಿಗೆ ನೀಡದೆ, 40 -50ರ ವಯೋಮಾನದಲ್ಲಿರುವವರಿಗೆ ನೀಡಿದರೆ, ಅವರು ಇನ್ನೂ ಹೆಚ್ಚು ಕ್ರಿಯಾಶೀಲರಾಗಿ ಸೇವೆ ಸಲ್ಲಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ ಎಂದರು.
ಆದರೆ, ಡಿ.ವಿ.ಜಿ. ಪ್ರಶಸ್ತಿ ಪ್ರದಾನ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಅವರು ಪ್ರಶಸ್ತಿಗಳು ಸಮಾಜಕ್ಕೆ ಚೇತನ ನೀಡುತ್ತವೆ ಆದ್ದರಿಂದ ಹೆಚ್ಚು ಹೆಚ್ಚು ಪ್ರಶಸ್ತಿಗಳನ್ನು ನೀಡಬೇಕು ಎಂದು ಹೇಳುವ ಮೂಲಕ ಭಟ್ಟರ ಅಭಿಪ್ರಾಯವನ್ನು ನಯವಾಗಿ ಅಲ್ಲಗಳೆದರು.
ಇದಕ್ಕೂ ಮುನ್ನ ಹಿರಿಯ ಚಿತ್ರನಟ- ನಿರ್ದೇಶಕ ಜಿ.ವಿ. ಅಯ್ಯರ್ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಹಾಗೂ ಲೇಖಕ ಕೋಟೇಶ್ವರ ಸೂರ್ಯನಾರಾಯಣ ರಾವ್ ಅವರಿಗೆ ಡಿ.ವಿ.ಜಿ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಿರಿಯ ನ್ಯಾಯವಾದಿ ನಿಟ್ಟೂರು ಶ್ರೀನಿವಾಸರಾವ್ ಅಧ್ಯಕ್ಷತೆ ವಹಿಸಿದ್ದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications