ಉತ್ತರ ಕರ್ನಾಟಕದ ಸಮಸ್ಯೆ ಚರ್ಚೆಗೆ 6ರಂದು ಹುಬ್ಬಳ್ಳಿಯಲ್ಲಿ ಸಭೆ
ಬೆಂಗಳೂರು : ನೈಋತ್ಯ ರೈಲ್ವೆ ವಲಯ ಕಚೇರಿ ಸ್ಥಾಪನೆ ಹಾಗೂ ಹುಬ್ಬಳ್ಳಿ - ಧಾರವಾಡದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯೂ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಹತ್ತಾರು ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಜೂನ್ 6ರ ಬುಧವಾರ ಹುಬ್ಬಳ್ಳಿಯಲ್ಲಿ ಉನ್ನತ ಮಟ್ಟದ ಸಭೆಯಾಂದನ್ನು ಕರೆದಿದ್ದಾರೆ.
ಪ್ರಾದೇಶಿಕ ಅಸಮತೋಲನೆ ನಿವಾರಣೆಗೆ ರಾಜ್ಯ ಸರಕಾರ ನೇಮಿಸಿದ್ದ ಆಯೋಗದ ಅಧ್ಯಕ್ಷ ಡಾ. ಡಿ.ಎಂ. ನಂಜುಂಡಪ್ಪ ಅವರು ನೀಡಿರುವ ವರದಿ ಸರಕಾರದ ಕೈಯಲ್ಲಿದ್ದು, ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಭೆಗೆ ಮಹತ್ವ ಬಂದಿದೆ.
ಆಯೋಗದ ವರದಿಯಲ್ಲಿ ಸೂಚಿಸಲಾಗಿರುವ ಸಲಹೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಮಿಗಿಲಾಗಿ ಹೈಟೆಕ್ ಮುಖ್ಯಮಂತ್ರಿ ಕೃಷ್ಣ ಅವರು ಉತ್ತರ ಕರ್ನಾಟಕವನ್ನು ಮರೆತಿದ್ದಾರೆ ಎಂಬ ಆರೋಪಗಳಿಗೆ ಈ ಉನ್ನತ ಮಟ್ಟದ ಸಭೆ ಉತ್ತರ ನೀಡಲಿದೆ ಎಂದೂ ನಿರೀಕ್ಷಿಸಲಾಗಿದೆ.
ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರು, ಸಂಸದರು, ಉನ್ನತಾಧಿಕಾರಿಗಳು ಪಾಲ್ಗೊಂಡು ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದಾರೆ. ಕುಡಿಯುವ ನೀರು, ವಿದ್ಯುತ್, ಶಿಕ್ಷಣ, ನೀರಾವರಿ ಮೊದಲಾದ ಮೂಲಭೂತ ಸೌಕರ್ಯ ಹಾಗೂ ಹೈಕೋರ್ಟ್ ಪೀಠ, ನೈಋತ್ಯ ರೈಲ್ವೆ ವಲಯ ಸಭೆಯಲ್ಲಿ ಚರ್ಚೆಗೆ ಬರಲಿರುವ ಪ್ರಮುಖ ವಿಷಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications