ರಾಜ್ಯದ 49 ನಗರ ಸಂಸ್ಥೆಗಳಿಗೆ ಜುಲೈ 8ರಂದು ಚುನಾವಣೆ
ಬೆಂಗಳೂರು : ರಾಜ್ಯದ 4 ನಗರಸಭೆ, ಒಂದು ಪುರಸಭೆ ಹಾಗೂ 44 ಪಟ್ಟಣ ಪಂಚಾಯ್ತಿಗಳು ಸೇರಿದಂತೆ ಒಟ್ಟು 49 ನಗರಸಂಸ್ಥೆಗಳಿಗೆ ಜುಲೈ 8ರಂದು ಚುನಾವಣೆ ನಡೆಯಲಿದೆ. ರಾಜ್ಯ ಚುನಾವಣೆ ಆಯೋಗ ಗುರುವಾರ ಈ ಸಂಬಂಧ ವೇಳಾಪಟ್ಟಿ ಬಿಡುಗಡೆ ಮಾಡಿದೆ.
ಜೂನ್ 15ರಂದು ಅಧಿಕೃತವಾಗಿ ಚುನಾವಣೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುತ್ತದಾದರೂ, ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರುತ್ತದೆ ಎಂದು ರಾಜ್ಯ ಚುನಾವಣಾಧಿಕಾರಿ ಬಿ. ಮುನಿಯಪ್ಪ ಸುದ್ದಿಗಾರರಿಗೆ ತಿಳಿಸಿದರು.
ಬೆಂಗಳೂರು ನಗರದ ವ್ಯಾಪ್ತಿಯಲ್ಲೇ ಇರುವ ಬ್ಯಾಟರಾಯನಪುರ, ಬೊಮ್ಮನಹಳ್ಳಿ, ದಾಸರಹಳ್ಳಿ ಮತ್ತು ಪಟ್ಟಣಗೆರೆ ನಗರಸಭೆ, ಕೆಂಗೇರಿ ಪುರಸಭೆ ಹಾಗೂ 44 ಪಟ್ಟಣ ಪಂಚಾಯ್ತಿಗಳಿಗೆ ಚುನಾವಣೆ ನಡೆಯಲಿದೆ ಎಂದು ಅವರು ಹೇಳಿದರು. 15ರಿಂದಲೇ ನಾಮಪತ್ರ ಸ್ವೀಕಾರ ಆರಂಭವಾಗಲಿದೆ. ಜೂ.23ರಿಂದ ನಾಮಪತ್ರ ಪರಿಶೀಲನೆ, 25ರಂದು ನಾಮಪತ್ರ ಹಿಂದೆ ಪಡೆಯಲು ಕೊನೆಯ ದಿನವಾಗಿದ್ದು, ಅಗತ್ಯ ಬಿದ್ದಲ್ಲಿ ಜುಲೈ 8ರ ಭಾನುವಾರ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಅವರು ವಿವರಿಸಿದರು.
481567 ಪುರುಷರು, 422702 ಮಹಿಳಾ ಮತದಾರರೂ ಸೇರಿದಂತೆ ಒಟ್ಟು 9 ಲಕ್ಷದ ನಾಲ್ಕು ಸಾವಿರದ 69 ಮತದಾರರು ಮತದಾನದ ಹಕ್ಕು ಪಡೆದಿದ್ದಾರೆ. ಒಟ್ಟು 1103 ಮತಗಟ್ಟೆಗಳ ಪೈಕಿ 306 ಸೂಕ್ಷ್ಮ ಹಾಗೂ 460 ಅತಿ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.
9ರಂದು ಮತ ಎಣಿಕೆ : ಜುಲೈ 9ರಂದು ಮತಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 5000 ಸಿಬ್ಬಂದಿ ಚುನಾವಣೆ ಕಾರ್ಯದಲ್ಲಿ ಆಯೋಗಕ್ಕೆ ನೆರವಾಗಲಿದ್ದಾರೆ ಎಂದ ಅವರು, ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು ಬರುವ ನವೆಂಬರ್‌ನಲ್ಲಿ ನಡೆಸುವ ಸೂಚನೆಯನ್ನೂ ನೀಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications