ಕಾವೇರಿ ವಿವಾದ : ಕೇಂದ್ರದ ಸೂಚನೆಗೆ ಕಾಯುತ್ತಿರುವ ಕೃಷ್ಣ
ಧಾರವಾಡ : ಕಾವೇರಿ ನೀರು ಹಂಚಿಕೆ ಕುರಿತಂತೆ ಉಭಯ ರಾಜ್ಯಗಳಿಗೆ ಅನ್ಯಾಯವಾಗದಂತೆ ಪ್ರಧಾನಿ ವಾಜಪೇಯಿ ಮಧ್ಯಸ್ಥಿಕೆ ವಹಿಸುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ , ಪ್ರಸ್ತುತ ನೀರು ಹಂಚಿಕೆ ಪ್ರಕರಣದ ಬಗೆಗೆ ಕೇಂದ್ರದ ಸೂಚನೆಗಳನ್ನು ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ಕಾವೇರಿ ನ್ಯಾಯ ಪಂಚಾಯಿತಿಯ ಮಧ್ಯಂತರ ಆದೇಶವನ್ನು ಜಾರಿಗೊಳಿಸುವಂತೆ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಯವರನ್ನು ಒತ್ತಾಯಿಸಿರುವ ಬಗ್ಗೆ ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಉತ್ತರಿಸುತ್ತಿದ್ದರು. ನಾವೀ ವಿಷಯವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ . ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ತಮಿಳುನಾಡಿನಲ್ಲಿ ಈ ವಿಷಯ ಪ್ರಸ್ತಾಪವಾಗುವುದು ಸಹಜ ಎಂದು ಕೃಷ್ಣ ಅಭಿಪ್ರಾಯಪಟ್ಟರು.
ತಮಿಳುನಾಡಿನೊಂದಿಗೆ ಸೌಹಾರ್ದ ಸಂಬಂಧ ಹೊಂದಬೇಕೆನ್ನುವುದೇ ತಮ್ಮ ಅಪೇಕ್ಷೆ. ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪು ಹೊರ ಬಿದ್ದ ನಂತರವೇ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕೃಷ್ಣ ಹೇಳಿದರು. ಅಗತ್ಯ ಬಿದ್ದರೆ ಪ್ರಧಾನಿಯವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ ಅವರು, ಉಭಯ ರಾಜ್ಯಗಳ ನಡುವೆ ಪ್ರಧಾನಿ ವಾಜಪೇಯಿ ಮಧ್ಯಸ್ಥಿಕೆ ವಹಿಸಬೇಕೆನ್ನುವ ಆಶಯ ವ್ಯಕ್ತಪಡಿಸಿದರು.(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣ ಗಾರುಡಿ
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications