ಪ್ರಧಾನಿ ವಾಜಪೇಯಿ ಬಲ ಮಂಡಿ ಶಸ್ತ್ರಚಿಕಿತ್ಸೆ ಯಶಸ್ವಿ
ಮುಂಬಯಿ : ಪ್ರಧಾನಿ ವಾಜಪೇಯಿ ಅವರ ಬಲ ಮಂಡಿಗೆ ಇಲ್ಲಿನ ಬ್ರೀಚ್ಕ್ಯಾಂಡಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಯಿತು.
ಬೆಳಿಗ್ಗೆ 8.45 ರ ಸುಮಾರಿಗೆ ಗಾಲಿ ಕುರ್ಚಿಯಲ್ಲಿ ವಾಜಪೇಯಿ ಅವರನ್ನು ಶಸ್ತ್ರಚಿಕಿತ್ಸೆ ಕೊಠಡಿಯಾಳಗೆ ಕರೆದೊಯ್ಯಲಾಯಿತು. ಸುಮಾರು ಒಂದು ಗಂಟೆ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಯಿತು. ನ್ಯೂಯಾರ್ಕ್ ಮೂಲದ ಡಾ. ರಣಾವತ್ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡದ ನೇತೃತ್ವ ವಹಿಸಿದ್ದರು. ಸಂಜೆ 4 ಗಂಟೆಗೆ ರಣಾವತ್ ಅವರು ಪ್ರಧಾನಿಯವರ ಶಸ್ತ್ರ ಚಿಕಿತ್ಸೆಯ ವಿವರಗಳನ್ನು ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸುದ್ದಿಗಾರರಿಗೆ ವಿವರಿಸುವರು.
ಬುಧವಾರ ಸಂಜೆಯೇ ದೆಹಲಿಯಿಂದ ಮುಂಬಯಿಗೆ ಆಗಮಿಸಿದ ಗೃಹ ಸಚಿವ ಎಲ್.ಕೆ. ಅದ್ವಾನಿ ಶಸ್ತ್ರಚಿಕಿತ್ಸೆ ಕೊಠಡಿಗೆ ತೆರಳುವ ಮುನ್ನ ವಾಜಪೇಯಿ ಅವರನ್ನು ಬೆಳಗ್ಗೆ 7.30 ರ ವೇಳೆಗೆ ಭೇಟಿ ಮಾಡಿದರು. ಬೆಳಗ್ಗೆ 7 ರ ಸುಮಾರಿಗೆ ಮಾಹಿತಿ ತಂತ್ರಜ್ಞಾನ ಸಚಿವ ಪ್ರಮೋದ್ ಮಹಾಜನ್ ಅವರು ಪ್ರಧಾನಿಯವರನ್ನು ಭೇಟಿ ಮಾಡಿದ್ದರು. ಶಸ್ತ್ರ ಚಿಕಿತ್ಸೆ ನಡೆಯುವ ಸಂದರ್ಭದಲ್ಲಿ ವಾಜಪೇಯಿ ಅವರ ಕುಟುಂಬದ ಸದಸ್ಯರು ಶಸ್ತ್ರಚಿಕಿತ್ಸೆ ಕೊಠಡಿಯ ಹೊರಭಾಗದಲ್ಲಿ ದುಗುಡದಿಂದ ಕಾಯುತ್ತಿದ್ದರು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications