ರಾಯಚೂರು : ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಶೀಘ್ರ ಕೆಸರು ಕಲ್ಲು
ರಾಯಚೂರು : ಪಟ್ಟಣದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ನಿರ್ಧರಿಸಲಾಗಿದ್ದು, ಆ ಕುರಿತ ಪೂರ್ವ ಕಾಮಗಾರಿ ಸಭೆ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್‌ನ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು.
ಒಂದು ವರ್ಷದ ಕೆಳಗೆ ರಾಯಚೂರಿನಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕನಸಿನ ಮಾತೆಂದೇ ಪರಿಗಣಿಸಲ್ಪಟ್ಟಿತ್ತು. ಆದರೆ ರಾಯಚೂರಿನಲ್ಲಿ ಸ್ಟೇಡಿಯಂ ಸಹಾಯಾರ್ಥ ಕಳೆದ ಫೆಬ್ರವರಿಯಲ್ಲಿ ಕರ್ನಾಟಕ ಇಲೆವೆನ್ ಹಾಗೂ ಇಂಡಿಯಾ ಇಲೆವನ್ ತಂಡಗಳ ನಡುವಿನ ಒಂದು ದಿನದ ಮ್ಯಾಚ್‌ನಿಂದ 47.7 ಲಕ್ಷ ರೂಪಾಯಿ ಸಂಗ್ರಹಿಸಲಾಗಿತ್ತು. ಈ ಪಂದ್ಯವನ್ನು ಆಯೋಜಿಸುವಲ್ಲಿ ಭಾರತ ಕ್ರಿಕೆಟ್ ತಂಡದ ಉಪನಾಯಕ ರಾಹುಲ್ ದ್ರಾವಿಡ್ ಪ್ರಮುಖ ಪಾತ್ರ ವಹಿಸಿದ್ದರು.
ಸ್ಮರಣ ಸಂಚಿಕೆ, ದೇಣಿಗೆ ಮತ್ತು ಜಾಹೀರಾತಿನ ಮುಖಾಂತರ ಸ್ಟೇಡಿಯಂ ನಿರ್ಮಾಣಕ್ಕಾಗಿ ಹಣ ಹೊಂದಿಸಿಕೊಳ್ಳಲಾಗಿದ್ದು ಇನ್ನೊಂದು ತಿಂಗಳಲ್ಲಿ ಸ್ಟೇಡಿಯಂ ಕಾಮಗಾರಿಗೆ ಕೆಸರು ಕಲ್ಲು ಹಾಕಲಾಗುವುದು ಎಂದು ಬ್ರಿಜೇಶ್ ಪಟೇಲ್ ಹೇಳಿದ್ದಾರೆ.
ಪೂರ್ವ ಕಾಮಗಾರಿ ಸಭೆಯಲ್ಲಿ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಅಧ್ಯಕ್ಷ ಕೆ.ಎಂ. ರಾಮ್ ಪ್ರಸಾದ್, ಉಪ ಆಯುಕ್ತ ಜಿ. ಕುಮಾರ ನಾಯಕ್ ಉಪಸ್ಥಿತರಿದ್ದರು. ಬ್ರಿಜೇಶ್ ಪಟೇಲ್ ಹಾಗೂ ಜಿ. ಕುಮಾರ್ ನಾಯಕ್ ಅವರು ಕ್ರೀಡಾಂಗಣ ನಿರ್ಮಾಣ್ಕಕ್ಕೆ ಸಂಗ್ರಹಿಸಿರುವ ಹಣವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಸ್ಟೇಡಿಯಂ ಕೆಲಸವನ್ನು ಆರಂಭಿಸಬೇಕು ಎಂದು ಕ್ರಿಕೆಟ್ ಅಸೋಸಿಯೇಷನ್ ಸಂಯೋಜಕ ಅಬ್ದುಲ್ ಹಕೀಮ್ ಅವರಿಗೆ ಸೂಚಿಸಿದ್ದಾರೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications