‘ಇಂದೋ, ನಾಳೆಯೋ ವಾಜಪೇಯಿ ಪುಟ್ಟ ಪುಟ್ಟ ಹೆಜ್ಜೆ ಇಡ್ತಾರೆ’
ಮುಂಬಯಿ : ಗುರುವಾರ ಬ್ರೀಚ್ಕ್ಯಾಂಡಿ ಆಸ್ಪತ್ರೆಯಲ್ಲಿ ಬಲ ಮಂಡಿಯ ಶಸ್ತ್ರ ಚಿಕಿತ್ಸೆಗೊಳಗಾದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಹಸ್ಥಿತಿ ಉತ್ತಮವಾಗಿದ್ದು, ಒಂದೆರಡು ದಿನಗಳಲ್ಲಿ ಅವರು ಹೆಜ್ಜೆ ಊರಿ ನಡೆಯಬಹುದಾಗಿದೆ ಎಂದು ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯ ಡಾ.ಚಿತ್ತರಂಜನ್ ರಣಾವತ್ ತಿಳಿಸಿದ್ದಾರೆ.
ಶುಕ್ರವಾರವೇ ವಾಜಪೇಯಿ ಹಾಸಿಗೆ ಬಿಟ್ಟು ಮೇಲೇಳುವ ಸಾಧ್ಯತೆಯಿದೆ. ಅಕಸ್ಮಾತ್ ಕಷ್ಟವಾದಲ್ಲಿ ಶನಿವಾರದಿಂದ ಅವರು ನಿಧಾನ ಹೆಜ್ಜೆ ಇಡಬಹುದು. 8-10 ದಿನಗಳ ಕಾಲ ಅವರು ಆಸ್ಪತ್ರೆಯಲ್ಲೇ ಉಳಿಯಬೇಕು. ಇನ್ನು ಮೂರು ದಿನಗಳ ಕಾಲ ಅವರ ಭೇಟಿ ಮಾಡುವುದನ್ನು ನಿರ್ಬಂಧಿಸಲಾಗಿದೆ ಎಂದು ರಣಾವತ್ ಹೇಳಿದರು.
ಎಂಟು ತಿಂಗಳ ಹಿಂದೆ ಎಡ ಮಂಡಿಯ ಶಸ್ತ್ರಚಿಕಿತ್ಸೆ ಮಾಡಿದಂತೆಯೇ ಬಲ ಮಂಡಿಯ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದೇನೆ. ಎರಡು ತಾಸುಗಳ ಕಾಲದ ಈ ಶಸ್ತ್ರಚಿಕಿತ್ಸೆ ವೇಳೆ ವಾಜಪೇಯಿ ಅವರು ಪ್ರಜ್ಞಾವಸ್ಥೆಯಲ್ಲೇ ಇದ್ದರು. ಆದರೆ ಶಸ್ತ್ರಚಿಕಿತ್ಸೆಯನ್ನು ನೋಡಲಿಲ್ಲ ಎಂದು ಚಿತ್ತರಂಜನ್ ವಿವರಿಸಿದರು.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications