ಕೆ.ಜಿ.ಎಫ್. ಗಣಿ ಕಾರ್ಮಿಕರಿಂದ ಸ್ವರ್ಣಭವನ ಮುತ್ತಿಗೆ
ಕೆ.ಜಿ.ಎಫ್: ಕಳೆದ ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೋಲಾರ ಚಿನ್ನದ ಗಣಿ ಕಾರ್ಮಿಕರು ವೇತನ ಪಾವತಿಗೆ ಆಗ್ರಹಿಸಿ ಗಣಿಯ ಆಡಳಿತ ಕಚೇರಿಯಾದ ಸ್ವರ್ಣಭವನಕ್ಕೆ ಶುಕ್ರವಾರ ಮುತ್ತಿಗೆ ಹಾಕಿದರು. ಗಣಿಯ ವ್ಯವಸ್ಥಾಪಕ ನಿರ್ದೇಶಕ ಸಂಪತ್ಕುಮಾರ್ ಅವರಿಗೆ ಘೕರಾವ್ ಮಾಡಿದರು.
ಕಳೆದ ಮೂರು ದಿನದಿಂದ ವೇತನ ಪಾವತಿ ಮಾಡುವಂತೆ ಆಗ್ರಹಿಸಿ ಧರಣಿ ನಡೆಸುತ್ತಿದ್ದ ನೌಕರರು, ಶುಕ್ರವಾರ ತಾಳ್ಮೆ ಕಳೆದುಕೊಂಡು ಮುತ್ತಿಗೆ ಹಾಕಿದರಲ್ಲದೆ, ಕಾರ್ಮಿಕರಿಗೆ ವೇತನ ನೀಡಲು ಸಾಧ್ಯವಿಲ್ಲದಿದ್ದಲ್ಲಿ ರಾಜೀನಾಮೆ ನೀಡಬೇಕು ಎಂದು ವ್ಯವಸ್ಥಾಪಕರನ್ನು ಆಗ್ರಹಿಸಿದರು.
ನ್ಯಾಯಾಲಯದ ಆದೇಶ: ಮೂರು ವಾರದ ಅವಧಿಯಾಳಗೆ ಕೋಲಾರ ಚಿನ್ನದ ಗಣಿ ಕಾರ್ಮಿಕರಿಗೆ ಮೂರು ತಿಂಗಳ ಸಂಬಳ ಪಾವತಿ ಮಾಡುವಂತೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ವೇತನ ಪಾವತಿಸುವಂತೆ ಈ ಹಿಂದೆ ನ್ಯಾಯಾಲಯ ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸಲ್ಲಿಸಿದ್ದ ಮನವಿಯ ಅರ್ಜಿಯನ್ನು ತಳ್ಳಿಹಾಕಿರುವ ಹೈಕೋರ್ಟ್ ತಾನು ಈ ಮೊದಲು ನೀಡಿದ್ದ ತೀರ್ಪನ್ನೇ ಎತ್ತಿಹಿಡಿದಿದೆ.
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications