ಬೆಂಗಳೂರನ್ನು ಮೆಟ್ರೋಸಿಟಿಯಾಗಿ ಪರಿವರ್ತಿಸಲು ನಿರ್ಧಾರ
ಬೆಂಗಳೂರು: ಬೆಂಗಳೂರು ನಗರವನ್ನು ಮೆಟ್ರೋ ಸಿಟಿಯಾಗಿ ಪರಿವರ್ತಿಸಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಬೆಂಗಳೂರು ಹೊರವಲಯದಲ್ಲಿರುವ ಏಳು ನಗರಸಭೆಗಳನ್ನೂ ಸೇರಿಸಿಕೊಂಡು ಬೆಂಗಳೂರನ್ನು ಮೆಟ್ರೋ ನಗರವನ್ನಾಗಿ ಪರಿವರ್ತಿಸಲು ತೀರ್ಮಾನಿಸಲಾಗಿದೆ.
ಈ ಕಾರ್ಯಕ್ಕಾಗಿ ಬೊಮ್ಮನಹಳ್ಳಿ, ಬ್ಯಾಟರಾಯನಪುರ, ದಾಸರಹಳ್ಳಿ, ಪಟ್ಟಣಗೆರೆ, ಕೆ.ಆರ್. ಪುರಂ, ಮಹದೇವಪುರ ನಗರಸಭೆಗಳು ಹಾಗೂ ಕೆಂಗೇರಿ ಪಟ್ಟಣ ಪಂಚಾಯ್ತಿಗಳನ್ನು ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ವಿಲೀನಗೊಳಿಸಲು ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.
ಮೆಟ್ರೋ ಸಿಟಿ ಎಂಬುದು ಹೇಗಿರಬೇಕು. ಅದರ ಪರಿಕಲ್ಪನೆಗಳು ಏನು? ಎಂಬ ಬಗ್ಗೆ ಚಿಂತನೆ ನಡೆಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಡಿ.ಬಿ. ಚಂದ್ರೇಗೌಡ ಅವರ ನೇತೃತ್ವದಲ್ಲಿ ಸಂಪುಟದ ಉಪಸಮಿತಿ ರಚಿಸಲಾಗಿದೆ.
ಸಚಿವರುಗಳಾದ ಪ್ರೊ. ಬಿ.ಕೆ. ಚಂದ್ರಶೇಖರ್, ಡಿ.ಕೆ. ಶಿವಕುಮಾರ್, ಚಿಮ್ಮನಕಟ್ಟಿ, ಎ. ಕೃಷ್ಣಪ್ಪ ಅವರು ಸಮಿತಿಯ ಸದಸ್ಯರಾಗಿದ್ದಾರೆ. ಚಂದ್ರೇಗೌಡರ ನೇತೃತ್ವದಲ್ಲಿ ಈಗಾಗಲೇ ಚಿಂತನ- ಮಂಥನ ನಡೆಸುತ್ತಿರುವ ಸಮಿತಿಯು 15 ದಿನಗಳಲ್ಲಿ ವರದಿ ಸಲ್ಲಿಸಲಿದೆ ಎಂದು ಉನ್ನತ ಮಟ್ಟದ ಮೂಲಗಳು ತಿಳಿಸಿವೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications