Get Updates
Get notified of breaking news, exclusive insights, and must-see stories!

ಬೀದರ್‌, ಗುಲ್ಬರ್ಗಾ ಸೇರಿ ರಾಜ್ಯದಲ್ಲಿ 50 ಸಾವಿರ ನಿವೇಶನ ಮಾರಾಟ

ಬೆಂಗಳೂರು : ಬೀದರ್‌, ಗುಲ್ಬರ್ಗಾ, ಬಳ್ಳಾರಿ ಸೇರಿದಂತೆ ರಾಜ್ಯದ ಇಪ್ಪತ್ತೇಳು ನಗರಾಭಿವೃದ್ಧಿ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಒಟ್ಟು 50 ಸಾವಿರ ನಿವೇಶನಗಳನ್ನು ವಿಂಗಡಿಸಿ, ಹರಾಜು ಮೂಲಕ ಮಾರಾಟ ಮಾಡುವ ಯೋಜನೆಗೆ ಕರ್ನಾಟಕ ರಾಜ್ಯ ಸರಕಾರ ಒಪ್ಪಿಗೆ ನೀಡಿದೆ.

2000-01ನೇ ಸಾಲಿನಲ್ಲಿ ಮೈಸೂರು, ಬೀದರ್‌, ಗುಲ್ಬರ್ಗಾ, ಶಿವಮೊಗ್ಗ, ಬಳ್ಳಾರಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ಒಟ್ಟು 19,575 ನಿವೇಶನ ವಿಂಗಡಣೆಗೆ ಅನುಮೋದನೆ ನೀಡಲಾಗಿದೆ. ಈ ವಿಷಯವನ್ನು ರಾಜ್ಯದ ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಕೆಲವು ನಗರಾಭಿವೃದ್ಧಿ ಪ್ರಾಧಿಕಾರಗಳು ನಿವೇಶನ ಹರಾಜು ಮಾಡುವ ಯೋಜನೆಗೆ ಭೂ ಮಾಲಿಕರಿಂದ ಜಮೀನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿವೆ ಎಂದ ಅವರು, ಪ್ರತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕನಿಷ್ಠ ಸಾವಿರದಿಂದ 2 ಸಾವಿರ ನಿವೇಶನಗಳನ್ನು ಮಾರಾಟ ಮಾಡಲಾಗುವುದು. ಈ ಸಂಬಂಧ ಆದೇಶ ಹೊರಡಿಸಲಾಗಿದೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸಲು ಹುಡ್ಕೋದಿಂದ 200 ಕೋಟಿ ರುಪಾಯಿ ಸಾಲ ಪಡೆಯಲು ಸರಕಾರ ಉದ್ದೇಶಿಸಿದೆ. ನಿವೇಶನಗಳ ಬೇಡಿಕೆ ಬಗ್ಗೆ ಅಧ್ಯಯನ ನಡೆಸಲು ಸಂಬಂಧಿಸಿದವರಿಗೆ ಆದೇಶ ನೀಡಲಾಗಿದೆ ಎಂದೂ ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+