ನರಹಂತಕನ ಹುಟ್ಟಡಗಿಸಲು ಹೊಸತಂತ್ರಕ್ಕಾಗಿ ಸೋಮವಾರ ಸಭೆ
ಬೆಂಗಳೂರು : ವೀರಪ್ಪನ್ ಶಿಕಾರಿಗೆ ಹೊಸ ತಂತ್ರ ರೂಪಿಸಲು ಕರ್ನಾಟಕ ಹಾಗೂ ತಮಿಳುನಾಡಿನ ಅಧಿಕಾರಿಗಳು ಸೋಮವಾರ ಚೆನ್ನೈನಲ್ಲಿ ಸಭೆ ಸೇರಲಿದ್ದಾರೆ.
ಹೊಸದಾಗಿ ನೇಮಕಗೊಂಡಿರುವ ಉಭಯ ರಾಜ್ಯಗಳ ಎಸ್ಟಿಎಫ್ ಮುಖ್ಯಸ್ಥರಾದ ಥೇವಾರಂ, ಐಜಿಪಿ ಕೆಂಪಯ್ಯ, ಎರಡೂ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಗೃಹ ಕಾರ್ಯದರ್ಶಿಗಳು ಹಾಗೂ ಪೊಲೀಸ್ ಮಹಾ ನಿರ್ದೇಶಕರು ಸೋಮವಾರ ಚೆನ್ನೈನಲ್ಲಿ ಸಭೆ ಸೇರಲಿದ್ದಾರೆ. ವೀರಪ್ಪನ್ ಹಿಡಿಯಲು ಹೊಸ ಕಾರ್ಯತಂತ್ರವನ್ನು ರೂಪಿಸುವುದು ಈ ಸಭೆಯ ಉದ್ದೇಶ ಎಂದು ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಜಯಲಲಿತಾ ಈ ಹಿಂದೆ ತಮಿಳುನಾಡು ಮುಖ್ಯಮಂತ್ರಿಯಾಗಿದ್ದಾಗ ವೀರಪ್ಪನ್ ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದ. ಈಗ ಇದೇ ಜಯಲಲಿತಾ ಮತ್ತೆ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ವೀರಪ್ಪನ್ ಹಿಡಿಯುವ ಸಂಕಲ್ಪ ಮಾಡಿದ್ದಾರೆ. ವಾಲ್ಟರ್ ಥೇವಾರಂ ಅವರನ್ನು ತಮಿಳುನಾಡು ಎಸ್ಟಿಎಫ್ ಪಡೆಯ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ.
ವೀರಪ್ಪನ್ ಸುಳಿವು ಕೊಟ್ಟವರಿಗೆ ಘೋಷಿಸಲಾಗಿದ್ದ ಬಹುಮಾನದ ಮೊತ್ತವನ್ನೂ ಹೆಚ್ಚಿಸಿದ್ದಾರೆ. ಈ ಎಲ್ಲಾ ಹೆಜ್ಜೆಗಳ ನಂತರ ನಡೆಯಲಿರುವ ಈ ಸಭೆ ವೀರಪ್ಪನ್ ಶಿಕಾರಿ ಪ್ರಕ್ರಿಯೆಗೆ ಹೊಸ ಚಾಲನೆ ದಕ್ಕಿಸಿಕೊಡುವ ನಿರೀಕ್ಷೆಯಿದೆ. ಹೊಸ ಬಾಟಲಿಯಲ್ಲಿ ಹಳೆ ಮದ್ಯ ಎಂಬಂತಾಗದೆ ಈ ಸಭೆ ವೀರಪ್ಪನ್ ಜುಟ್ಟನ್ನು ಹಿಡಿಯುವ ಬಿಗಿ ಪಟ್ಟಾಗಿ ಹೊಮ್ಮುವುದೋ, ಏನೋ ಕಾದು ನೋಡಬೇಕು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ವೀರಪ್ಪನ್ ಶಿಕಾರಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications