‘ನಕಲಿ ಹಾವಳಿ ತಡೆಗೆ ಶೀಘ್ರವೇ ಡಿಜಿಟಲ್ ಪಾಸ್ಪೋರ್ಟ್ ವ್ಯವಸ್ಥೆ’
ಬೆಂಗಳೂರು: ನಕಲಿ ಪಾಸ್ಪೋರ್ಟ್ ಹಾವಳಿ ತಡೆಗಟ್ಟಲು ಕಂಪ್ಯೂಟರ್ ನೆರವಿನಿಂದ ಡಿಜಿಟಲ್ ಪಾಸ್ಪೋರ್ಟ್ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಇದು ಸದ್ಯದಲ್ಲೇ ಜಾರಿಗೂ ಬರಲಿದೆ ಎಂದು ಬೆಂಗಳೂರು ಪಾಸ್ಪೋರ್ಟ್ ಕಚೇರಿಯ ಅಧಿಕಾರಿ ಟಿ.ವಿ. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಕಂಪ್ಯೂಟರ್ ನೆರವಿನಿಂದ ಭಾವಚಿತ್ರಗಳನ್ನು ಸ್ಕ್ಯಾನ್ ಮಾಡಿ, ಹೆಸರು ಮತ್ತಿತರ ವಿವರಗಳನ್ನು ಮುದ್ರಿಸುವುದರಿಂದ ನಕಲಿ ಪಾಸ್ಪೋರ್ಟ್ ತಯಾರಿಕೆಗೆ ಅವಕಾಶ ಇರುವುದಿಲ್ಲ ಎಂದು ಅವರು ಹೇಳಿದ್ದಾರೆ. ಹಾಲಿ ಪಾಸ್ಪೋರ್ಟ್ ಸಿದ್ಧಪಡಿಸಲು 9 ಪ್ರತ್ಯೇಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಒಬ್ಬ ಅಧಿಕಾರಿ ಪ್ರತಿದಿನ 60 ಪಾಸ್ಪೋರ್ಟ್ ಬರೆಯುತ್ತಾರೆ.
ಕಂಪ್ಯೂಟರ್ ಮೂಲಕ ಪಾಸ್ಪೋರ್ಟ್ ನೀಡುವ ವ್ಯವಸ್ಥೆ ಜಾರಿಗೆ ಬಂದರೆ, ಶ್ರಮವೂ ಕಡಿಮೆ ಆಗುವುದಲ್ಲದೆ, ಸುಲಭವೂ ಆಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಈ ಕಾರ್ಯ ಪೂರ್ಣವಾಗಲಿದೆ.
ಈವರೆಗೆ 14 ಲಕ್ಷ ಪಾಸ್ಪೋರ್ಟ್ ದಾಖಲೆಗಳನ್ನು ಕಂಪ್ಯೂಟರ್ಗೆ ಅಳವಡಿಸಲಾಗಿದೆ. ಕಂಪ್ಯೂಟರ್ಗೆ ಪ್ರಿಂಟರ್ಗಳ ಅಳವಡಿಕೆಯಾದರೆ, ಪ್ರತಿದಿನ ಹೆಚ್ಚು ಪಾಸ್ಪೋರ್ಟ್ಗಳನ್ನು ನೀಡಲು ಅವಕಾಶ ಆಗುತ್ತದೆ. ಇದರಿಂದ ಜನರ ಸಮಯವೂ ಉಳಿಯಲಿದೆ ಎಂದು ಅವರು ಹೇಳಿದ್ದಾರೆ.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications