ಪುಟ್ಟರಾಜ ಗವಾಯಿಗಳು ನಡೆದಾಡುವ ದೇವರು-ಎಚ್ಕೆ ಪಾಟೀಲ್
ಗದಗ- ಸಾವಿರಾರು ಮಂದಿ ಅಂಧ ವಿದ್ಯಾರ್ಥಿಗಳಿಗೆ ಜಾತಿ ಮತದ ಹಂಗಿಲ್ಲದೆ ಸಂಗೀತ ಕಲಿಸುತ್ತಿರುವ ಪಂಡಿತ ಪುಟ್ಟ ರಾಜ ಗವಾಯಿ ಅವರಿಗೆ ಗದುಗಿನಲ್ಲಿ ಸಂಗೀತಾಭಿಮಾನಿಗಳು ಚಿನ್ನದ ಕಿರೀಟ ತೊಡಿಸಿ ಸಂಭ್ರಮಿಸಿದರು.
ಗದುಗಿನ ವೀರೇಶ್ವರ ಪುಣ್ಯಾಶ್ರಮದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಪುಟ್ಟರಾಜಗವಾಯಿಗಳಿಗೆ 1100 ಗ್ರಾಂ ತೂಕದ ಬಂಗಾರದ ಕಿರೀಟ ತೊಡಿಸಿದವರು ಡಾ. ಮೂಜಗಂ. 250 ಗ್ರಾಂ ತೂಕದ ಭಿನ್ನವತ್ತಳೆಯನ್ನು ಸಚಿವ ಎಚ್. ಕೆ. ಪಾಟೀಲ್ ಅವರು ಗವಾಯಿಗಳಿಗೆ ನೀಡಿ ಗೌರವಿಸಿದರು.
ನಂತರ ಮಾತನಾಡಿದ ಸಚಿವ ಎಚ್. ಕೆ. ಪಾಟೀಲ್, ಸಂಗೀತ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವ ಪುಟ್ಟ ರಾಜ ಗವಾಯಿಗಳ ಸಾಧನೆ ದೊಡ್ಡದು . ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಲು ಟೊಂಕ ಕಟ್ಟಿರುವ ಗವಾಯಿಗಳು ನಡೆದಾಡುವ ದೇವರು ಎಂದು ಕೊಂಡಾಡಿದರು. ಅವರ ನೇತೃತ್ವದಲ್ಲಿ ನಡೆಯುತ್ತಿರುವ ವೀರೇಶ್ವರ ಪುಣ್ಯಾಶ್ರಮ ರಾಷ್ಟ್ರದ ಮಾನವೀಯ ವಿಶ್ವ ವಿದ್ಯಾಲಯ ಎಂದು ಅವರು ಬಣ್ಣಿಸಿದರು.
ಕಾರ್ಯಕ್ರಮದ ಇನ್ನೋರ್ವ ಅತಿಥಿ ಸಚಿವ ರೋಶನ್ ಬೇಗ್ ಮಾತನಾಡಿ ಖ್ಯಾತ ಗಾಯಕ ನುಸೃತಫತೆ ಆಲಿಖಾನ್ ಅವರ ಸಂಗೀತ ಕಾರ್ಯಕ್ರಮದಿಂದ ಸಂಗ್ರಹವಾದ 5 ಲಕ್ಷ ರೂಪಾಯಿಗಳನ್ನು ಗವಾಯಿಗಳ ಸೇವೆಗೆ ಸಮರ್ಪಿಸಿರುವುದಾಗಿ ತಿಳಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications