Get Updates
Get notified of breaking news, exclusive insights, and must-see stories!

ಚಾಮುಂಡಿ ಬೆಟ್ಟದಲ್ಲಿ ದಾಸೋಹ ಭವನ, ಯಾತ್ರಿ ನಿವಾಸ

ಮೈಸೂರು : ನಂಜನಗೂಡಿನಲ್ಲಿ ನ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಚಾಲನೆ ನೀಡುತ್ತಿರುವಂತೆಯೇ ಇತ್ತ ಮುಜರಾಯಿ ಸಚಿವ ಬಾಬುರಾವ್‌ ಚಿಂಚನಸೂರ್‌ ಚಾಮುಂಡಿ ಬೆಟ್ಟಕ್ಕೆ ಕಾಯಕಲ್ಪ ಒದಗಿಸುವ ಯೋಜನೆಯ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದಲ್ಲಿರುವ ಎಲ್ಲ ಐತಿಹಾಸಿಕ ದೇವಸ್ಥಾನಗಳನ್ನು ಅಭಿವೃದ್ಧಿ ಪಡಿಸಲು ಸರಕಾರ ನಿರ್ಧರಿಸಿದ್ದು , ಚಾಮುಂಡಿ ಬೆಟ್ಟವೂ ಈ ಯೋಜನೆಯಡಿಯಲ್ಲಿ ಸೇರುತ್ತದೆ ಎಂದು ಸಚಿವರು ಮಂಗಳವಾರ ಸುದ್ದಿಗಾರರಿಗೆ ಹೇಳಿದ್ದಾರೆ. ಪ್ರವಾಸ ಪ್ರಿಯರನ್ನು ಆಕರ್ಷಿಸಲು ಚಾಮುಂಡಿ ಬೆಟ್ಟದಲ್ಲಿ ದಾಸೋಹ ಭವನ, ಯಾತ್ರಿ ನಿವಾಸಗಳನ್ನು ನಿರ್ಮಿಸುವ ಉದ್ದೇಶ ಸರಕಾರಕ್ಕಿದೆ. ಬೆಟ್ಟದ ತಪ್ಪಲಿನ ತಾವರೆಕಟ್ಟೆ ಬಳಿ ಸ್ವಾಗತ ಕಮಾನನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಚಾಮುಂಡಿ ದೇವಳದ ಆಡಳಿತ ವಿಭಾಗವನ್ನು ಇನ್ನೆರಡು ದಿನಗಳಲ್ಲಿ ಕಂಪ್ಯೂಟರೀಕರಣಗೊಳಿಸುವುದು. ಚಾಮುಂಡಿ ದೇವಳದ ಆಡಳಿತ ಮಂಡಳಿಯ ಅವ್ಯವಹಾರಗಳ ಬಗೆಗೆ ತನಿಖೆ ನಡೆಯುತ್ತಿದ್ದು , ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಿಂಚನಸೂರ್‌ ತಿಳಿಸಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+