ಒಂಡೇ ಕ್ರಿಕೆಟ್ : ಶೆಹ್ವಾಗ್, ದಿನೇಶ್, ರಿತಿಂದರ್‌ಗೆ ಬುಲಾವು
ಮುಂಬಯಿ : ಜೂನ್ 23 ರಿಂದ ಜುಲೈ 7 ರವರೆಗೆ ಜಂಬಾಬ್ವೆ ನೆಲದಲ್ಲಿ ನಡೆಯುವ ತ್ರಿಕೋಣ ಕ್ರಿಕೆಟ್ ಸರಣಿ ಪಂದ್ಯಗಳಿಗೆ ಭಾರತ ತಂಡವನ್ನು ಬುಧವಾರ ಪ್ರಕಟಿಸಲಾಗಿದ್ದು , ರಿತಿಂದರ್ ಸಿಂಗ್ ಸೋಧಿ, ವೀರೇಂದ್ರ ಶೆಹ್ವಾಗ್, ದಿನೇಶ್ ಮಾಂಗಿಯಾ ಹಾಗೂ ಹರ್ವೀಂದರ್ ಸಿಂಗ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ವೇಗದ ಬೌಲರ್ ಶ್ರೀನಾಥ್ ಅವರಿಗೆ ಅವರ ಕೋರಿಕೆಯ ಮೇರೆಗೆ ಏಕದಿನ ಪಂದ್ಯಗಳಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಉಳಿದಂತೆ ಶಿವಸುಂದರ್ ದಾಸ್, ರಮೇಶ್ ಹಾಗೂ ಸಾಯಿರಾಜ್ ಬಹುತುಲೆ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದು , ಜಿಂಬಾಬ್ವೆ ವಿರುದ್ಧದ ಎರಡನೇ ಟೆಸ್ಟ್ ಮುಗಿದ ನಂತರ (ಜೂನ್ 19) ಅವರುಗಳು ಭಾರತಕ್ಕೆ ವಾಪಸ್ಸಾಗುವರು.
ಕರ್ನಾಟಕದ ವೆಂಕಟೇಶ್ ಪ್ರಸಾದ್ ಹಾಗೂ ಸುನೀಲ್ ಜೋಶಿ ಮತ್ತೊಮ್ಮೆ ಆಯ್ಕೆದಾರರ ಅವಕೃಪೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಏಕದಿನ ಪಂದ್ಯಗಳಲ್ಲಿ ಉತ್ತಮ ಸಾಧನೆ ತೋರಿದ್ದ ವಿಕೆಟ್ ಕೀಪರ್ ವಿಜಯ್ ದಹಿಯಾ ಕೂಡ ತಂಡಕ್ಕೆ ಆಯ್ಕೆಯಾಗಿಲ್ಲ . ಬಿಸಿಸಿಐ ಕಾರ್ಯದರ್ಶಿ ಜಯವಂತ ಲೆಲೆ ತಂಡವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು. ಆಯ್ಕೆ ಸಮಿತಿ ಅಧ್ಯಕ್ಷ ಚಂದು ಬೋರ್ಡೆ ಕೂಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ತಂಡ ಇಂತಿದೆ-
ಸೌರವ್ ಗಂಗೂಲಿ (ನಾಯಕ), ರಾಹುಲ್ ದ್ರಾವಿಡ್ (ಉಪ ನಾಯಕ), ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ಹೇಮಾಂಗ್ ಬದಾನಿ, ಸಮೀರ್ ದಿಘ, ದೇಬಶಿಶ್ ಮೊಹಾಂತಿ, ಜಹೀರ್ ಖಾನ್, ಹರ್ಭಜನ್‌ಸಿಂಗ್, ರೀತಿಂದರ್ ಸಿಂಗ್ ಸೋಧಿ, ಹರ್ವೀಂದರ್ ಸಿಂಗ್, ಅಜಿತ್ ಅಗರ್ಕರ್, ದಿನೇಶ್ ಮಾಂಗಿಯಾ ಹಾಗೂ ವೀರೇಂದ್ರ ಶೆಹ್ವಾಗ್.
(ಏಜೆನ್ಸೀಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications