ಕೋಲ್ಕತಾ ಎಂಜಿನಿಯರಿಂಗ್ ಕಾಲೇಜ್- ಹಾರ್ವರ್ಡ್ ವಿವಿ ಬೆಸುಗೆ
* ಕ್ರಿತ್ತಿವಾಸ್ ಮುಖರ್ಜಿ
ಕೋಲ್ಕತ : ನಗರದಲ್ಲಿ ಅನಿವಾಸಿ ಭಾರತೀಯರು ನಡೆಸುತ್ತಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನೊಟ್ಟಿಗೆ ಹಾರ್ವರ್ಡ್ ವಿಶ್ವವಿದ್ಯಾಲಯ ಶೈಕ್ಷಣಿಕ ಒಪ್ಪಂದ ಮಾಡಿಕೊಳ್ಳಲಿದೆ.
ಶೈಕ್ಷಣಿಕ ಕೊಡು-ಕೊಳ್ಳುವಿಕೆ ಬಗ್ಗೆ ಹಾರ್ವರ್ಡ್ ವಿಶ್ವವಿದ್ಯಾಲಯದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇವೆ. ಅದು ಖಂಡಿತ ಫಲದಾಯಕವಾಗಲಿದೆ ಎಂಬ ಭರವಸೆ ನಮ್ಮದು ಎನ್ನುತ್ತಾರೆ ಪಶ್ಚಿಮ ಬಂಗಾಳದ ಪ್ರಥಮ ಖಾಸಗಿ ಎಂಜಿನಿಯರಿಂಗ್ ಕಾಲೇಜು, ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ (ಐಇಎಂ) ನ ವ್ಯವಸ್ಥಾಪಕ ನಿರ್ದೇಶಕ ಸತ್ಯಜಿತ್ ಚಕ್ರವರ್ತಿ.
ಇನ್ನು ಎರಡು ತಿಂಗಳಲ್ಲಿ ಒಡಂಬಡಿಕೆ ಜಾರಿಗೆ ಬರುವ ನಿರೀಕ್ಷೆಯಿದೆ. ಒಪ್ಪಂದದಿಂದ ಮೊದಲು ಸಂಶೋಧಕ- ಬೋಧಕರ ವಿನಿಮಯ ಸಾಧ್ಯವಾಗಲಿದೆ. ತದ ನಂತರ, ಎರಡನೇ ಹಂತದಲ್ಲಿ ಅಧ್ಯಾಪಕರ ವಿನಿಮಯ ಕಾರ್ಯಕ್ರಮ ಜಾರಿಗೆ ಬರಲಿದೆ. ಮೂರನೇ ಹಂತದಲ್ಲಿ ಹಾರ್ವಡ್ ವಿವಿ ಹಾಗೂ ಕೋಲ್ಕತಾ ಕಾಲೇಜಿನ ವಿದ್ಯಾರ್ಥಿಗಳ ನಡುವೆ ವಿಚಾರ ವಿನಿಮಯ ಸಾಧ್ಯವಾಗಲಿದೆ ಎಂದು ಚಕ್ರವರ್ತಿ ವಿವರಿಸಿದರು.
ಅಂದಹಾಗೆ, ಹಾರ್ವರ್ಡ್ ವಿಶ್ವವಿದ್ಯಾಲಯದೊಟ್ಟಿಗೆ ಸಂಬಂಧ ಬೆಳೆಸಹೊರಟಿರುವ ಭಾರತದ ಮೊದಲ ಸಂಸ್ಥೆ ಇದಾಗಿದೆ.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications