ಮುಂಗಾರ ನಂತರ ಕರಾವಳಿಯ ಏಳು ಕಡೆ ಕಾಯಂ ತಡೆಗೋಡೆ
ಬೆಂಗಳೂರು: ಮಳೆಗಾಲ ಬರುವಾಗ ಜೊತೆಯಲ್ಲಿಯೇ ಕರಾವಳಿಯಲ್ಲಿ ಕಡಲು ಕೊರೆತದ ಆಲಾಪವನ್ನು ಕರೆತರುತ್ತದೆ. ಪ್ರಸಕ್ತ ಮುಂಗಾರು ಮುಗಿಯುತ್ತಲೇ ಹತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ಕರಾವಳಿಯ ಏಳು ಕಡೆಗಳಲ್ಲಿ ಕಾಯಂ ತಡೆಗೋಡೆ ನಿರ್ಮಿಸುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಬಿ. ರಮಾನಾಥ ರೈ ಪುನರುಚ್ಚರಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಚಿವರು, ರಾಷ್ಟ್ರೀಯ ಕರಾವಳಿ ಸಂರಕ್ಷಣೆ ಕಾರ್ಯಕ್ರಮದ ಕ್ರಿಯಾ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ ಶೇ .75ರಷ್ಟು ಅಂದರೆ 10 ಕೋಟಿ ರೂಪಾಯಿ ನೆರವು ನೀಡಲಿದೆ. ಉಳಿದ ಹಣವನ್ನು ರಾಜ್ಯಸರಕಾರವೇ ಭರಿಸಲಿದೆ ಎಂದು ಹೇಳಿದರು.
ಉಡುಪಿ ತಾಲ್ಲೂಕಿನ ಕೆಮ್ಮಣ್ಣು ಮತ್ತು ಎರ್ಮಾಳ, ಕುಂದಾಪುರ ತಾಲ್ಲೂಕಿನ ಪಡುವರಿ, ಮಂಗಳೂರು ತಾಲ್ಲೂಕಿನ ಸಸಿಹಿತ್ಲು, ಅಂಕೋಲಾ ತಾಲ್ಲೂಕಿನ ಬೆಳಂಬರ, ಕುಮಟಾ ತಾಲ್ಲೂಕಿನ ಆಳ್ವೇಕೋಡಿ, ಬಂಟ್ವಾಳದ ಗೊರಟೆ ಕರಾವಳಿ ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದೆ.
ಉಲ್ಲಾಳದ ಕೋಟೆಪುರ ಮತ್ತು ಉಡುಪಿಯ ಪಡತೊನೈ ಭಾಗದಲ್ಲಿ ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ಸುರತ್ಕಲ್ ಇಂಜಿನಿಯರಿಂಗ್ ಕಾಲೇಜ್ನ ಸಲಹೆ ಮೇರೆಗೆ ತಡೆಗೋಡೆ ನಿರ್ಮಿಸಲಾಗುವುದು ಎಂದು ರಮಾನಾಥ ರೈ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications