ಮಂಗಳವಾರದಿಂದ ದೆಹಲಿಯ ನಿವಾಸದಲ್ಲೇ ಪ್ರಧಾನಿ ವಾಸ-ವಿಶ್ರಾಂತಿ
ನವದೆಹಲಿ : ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಬಲ ಮಂಡಿ ಶಸ್ತ್ರ ಚಿಕಿತ್ಸೆಯ ನಂತರ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಗುಣಮುಖರಾಗಿದ್ದು ಮಂಗಳವಾರ ಅವರು ರಾಜಧಾನಿಗೆ ವಾಪಾಸ್ಸಾಗಲಿದ್ದಾರೆ.
ಇನ್ನು ಮೂರು ವಾರಗಳ ಕಾಲ ತಮ್ಮ ನಿವಾಸದಲ್ಲಿಯೇ ಪ್ರಧಾನಿ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಮಾನಸಿಕವಾಗಿ ಸದೃಢರಾಗಿರುವ ವಾಜಪೇಯಿ, ಆಸ್ಪತ್ರೆಯಿಂದಲೇ ತಮ್ಮ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳವಾರದಿಂದ ಅವರು ತಮ್ಮ ನಿವಾಸದಿಂದಲೇ ಕೆಲಸ ಕಾರ್ಯಗಳನ್ನು ನಿರ್ವಹಿಸಲಿದ್ದಾರೆ ಎಂದು ಪ್ರಧಾನಿ ನಿವಾಸದ ಮೂಲಗಳು ಹೇಳಿವೆ.
76 ವರ್ಷದ ವಾಜಪೇಯಿ ಅವರ ಬಲಮಂಡಿಗೆ ಜೂನ್ 7ರಂದು ಡಾ. ಚಿತ್ತರಂಜನ್ ರಣಾವತ್ ಮುಂಬಯಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದರು. ತಮ್ಮ ನಿವಾಸದಲ್ಲಿಯೇ ಕೆಲಸ ನಿರ್ವಹಿಸಲಿರುವ ಪ್ರಧಾನಿಗಳಿಗೆ ಆರು ತಿಂಗಳ ಕಾಲ ಆರೈಕೆ ಮುಂದುವರೆಯುತ್ತದೆ. ಬೇಗನೇ ಗುಣಮುಖರಾಗಲು, ದೇಹದ ಬೊಜ್ಜು ಕಡಿಮೆ ಮಾಡಿಕೊಳ್ಳುವಂತೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ರಣಾವತ್ ಪ್ರಧಾನಿಗಳಿಗೆ ಸಲಹೆ ಮಾಡಿದ್ದಾರೆ.
ಜುಲೈ ತಿಂಗಳಲ್ಲಿ ಪಾಕಿಸ್ತಾನದ ಮಿಲಿಟರಿ ಆಡಳಿತಗಾರ ಜನರಲ್ ಪರ್ವೇಜ್ ಮುಷರ್ರಫ್ ಅವರ ಭಾರತ ಭೇಟಿಗೆ ಮುನ್ನ ತಮ್ಮ ಆರೋಗ್ಯ ಸುಧಾರಿಸಬೇಕೆಂಬುದು ವಾಜಪೇಯಿ ಬಯಕೆ. ತಾವು ವಾಪಾಸಾಗುವ ವೇಳೆ ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಹೂಗುಚ್ಛಗಳೊಂದಿಗೆ ಸ್ವಾಗತಿಸಲು ಮುಗಿ ಬೀಳಬಾರದು ಎಂದು ಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
(ಐಎಎನ್ಎಸ್)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications