‘ಗಾಂಧೀಜಿ ಮೇಜಿನ ಮಂಗಗಳಾಗುವುದು ಬೇಡ’- ಬೇಲಿಮಠ ಸ್ವಾಮೀಜಿ
ಬೆಂಗಳೂರು : ಮಹಾತ್ಮಗಾಂಧಿಯವರ ಮೇಜಿನ ಮೇಲಿನ ಮಂಗಗಳಂತೆ ಎಲ್ಲ ಅನ್ಯಾಯವನ್ನು ಸಹಿಸಿಕೊಳ್ಳದೆ, ಪ್ರತಿಭಟಿಸುವ ಗುಣ ರೂಢಿಸಿಕೊಳ್ಳಬೇಕೆಂದು ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ ಹೇಳಿದ್ದಾರೆ.
ಸೌಜನ್ಯ, ಸಜ್ಜನಿಕೆ, ಕರುಣೆಗಳ ಗುತ್ತಿಗೆ ತೆಗೆದುಕೊಂಡವರಂತೆ ಕನ್ನಡಿಗರು ವರ್ತಿಸುತ್ತಿದ್ದಾರೆ. ಫೀಡರ್ ಕಾಲುವೆ ನೀರನ್ನು ಆಂಧ್ರದವರು ಕಬಳಿಸಲು ಪ್ರಯತ್ನಿಸುತ್ತಿರುವಾಗ ನಾವು ಕೋರ್ಟಿನತ್ತ ನೋಡುತ್ತಿದ್ದೇವೆ. ರಾಜ್ಯದ ಪಾಲಿನ ನೀರನ್ನು ಉಳಿಸಿಕೊಳ್ಳಲು ಕನ್ನಡಿಗರೂ ಫೀಡರ್ ಕಾಲುವೆ ತೋಡಬೇಕು ಎಂದು ಸ್ವಾಮೀಜಿ ಕರೆ ನೀಡಿದರು. ಭಾನುವಾರ ಕಾವೇರಿ ಭವನ ಸಭಾಂಗಣದಲ್ಲಿ ಜರುಗಿದ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡುತ್ತಿದ್ದರು.
ಕಾನೂನಿನಿಂದ ಸಾಧ್ಯವಾಗದಿದ್ದಾಗ ಪರ್ಯಾಯ ಮಾರ್ಗ ಹುಡುಕಿಕೊಳ್ಳುವುದು ಅನಿವಾರ್ಯ. ಏಟಿಗೆ ಪ್ರತಿಯೇಟು ನೀಡಿದರೆ ಯಾರೂ ಕನ್ನಡದ ನೆಲ, ಜಲದ ತಂಟೆಗೆ ಬರುವುದಿಲ್ಲ . ನಾವೂ ಫೀಡರ್ ಕಾಲುವೆ ನಿರ್ಮಿಸಿದರೆ ಅವರಾಗಿಯೇ ಸಂಧಾನಕ್ಕೆ ಬರುತ್ತಾರೆ ಎಂದು ಸ್ವಾಮೀಜಿ ಹೇಳಿದರು. ಕನ್ನಡಿಗರು ತಕ್ಷಣ ಎಚ್ಚತ್ತುಕೊಂಡರೆ ನೆಲ, ಜಲದ ರಕ್ಷಣೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟ ಸ್ವಾಮೀಜಿ, ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications