ನಾಳೆ ಮಂಗಳೂರು ವಿ.ವಿ. ಪದವಿ ಪರೀಕ್ಷಾ ಫಲಿತಾಂಶ
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯವು ಕಳೆದ ಏಪ್ರಿಲ್ - ಮೇ ತಿಂಗಳಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ಫಲಿತಾಂಶ ಜೂನ್ 19ರ ಮಂಗಳವಾರ ಪ್ರಕಟವಾಗಲಿದೆ. ಈ ಸಾಲಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ 7279 ವಿದ್ಯಾರ್ಥಿಗಳ ಪೈಕಿ 4757 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಶೇ. 65.35ರಷ್ಟು ಫಲಿತಾಂಶ ದಾಖಲಾಗಿದೆ.
ಮಂಗಳೂರಿನ ಸಂತ ಅಲೋಷಿಯಸ್ ಸಂಜೆ ಕಾಲೇಜು ಈ ಬಾರಿ ರ್ಯಾಂಕ್ಗಳಿಸುವ ಮೂಲಕ ದಾಖಲೆ ಸಾಧಿಸಿದೆ. ಉಜಿರೆಯ ಎಸ್.ಡಿ.ಎಂ. ಕಾಲೇಜು 7 ರ್ಯಾಂಕ್ ಹಾಗೂ ಉಡುಪಿಯ ಎಂಜಿಎಂ ಕಾಲೇಜು ಆರು ರ್ಯಾಂಕ್ಗಳನ್ನು ಪಡೆದಿವೆ.
ಪರೀಕ್ಷೆಗೆ ಕುಳಿತ 2831 ಬಾಲಕರ ಪೈಕಿ 1572 ಮಂದಿ ಉತ್ತೀರ್ಣರಾಗಿದ್ದರೆ, 4448 ವಿದ್ಯಾರ್ಥಿನಿಯರ ಪೈಕಿ 3185 ಬಾಲಕಿಯರು ತೇರ್ಗಡೆಯಾಗಿದ್ದಾರೆ. ಈ ವಿಷಯವನ್ನು ಮಂಗಳೂರು ವಿ.ವಿ. ಪರೀಕ್ಷಾಂಗ ವಿಭಾಗದ ಕುಲಸಚಿವರು ತಿಳಿಸಿದ್ದಾರೆ.
ಕಲಾ ವಿಭಾಗದಲ್ಲಿ ಕಟೀಲು ಕಾಲೇಜಿನ ರಜನಿ ಕೆ., ವಿಜ್ಞಾನ ವಿಭಾಗದಲ್ಲಿ ಉಡುಪಿಯ ಎಂಜಿಎಂ ಕಾಲೇಜಿನಿ ಸವಿತಾ, ವಾಣಿಜ್ಯ ವಿಭಾಗದಲ್ಲಿ ಶಿರ್ವ ಕಾಲೇಜಿನ ಕೆರೋಲಿನ್ ಅಂಜುಲಿನ್ ಪ್ರಥಮ ರ್ಯಾಂಕ್ ಪಡೆದಿದ್ದಾರೆ. ಬಿ.ಎಸ್. ಡಬ್ಲ್ಯೂ. ವಿಭಾಗದ ಪ್ರಥಮ ರ್ಯಾಂಕ್ ರೋಶಿನಿ ನಿಲಯದ ತೃಶಿಯಮ್ಮ ಅವರ ಪಾಲಾಗಿದೆ.
(ಮಂಗಳೂರು ಪ್ರತಿನಿಧಿಯಿಂದ)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications