ಕೊಡಗಿನ ಹೊಸ ಜಿಲ್ಲಾಧಿಕಾರಿಯಾಗಿ ಜಿ.ವಿ. ರಾಮಚಂದ್ರ
ಮಡಿಕೇರಿ: ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಜಿ.ವಿ. ರಾಮಚಂದ್ರ ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಮೂಲತಃ ಕೋಲಾರದ ಗಂಜಿಗುಂಟೆಯವರಾದ ರಾಮಚಂದ್ರ ಅವರು ವಿವಿಧ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸಿದ ಅನುಭವ ಉಳ್ಳವರು.
ಸಾಂಕೇತಿಕವಾಗಿ ಕೊಡಗು ಜಿಲ್ಲಾ ತಾತ್ಕಾಲಿಕವಾಗಿ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಜಯರಾಂ ಅವರಿಂದ ಜಿಲ್ಲಾಧಿಕಾರಿ ಕಚೇರಿಯ ಬೀಗದ ಕೈ ತೆಗೆದುಕೊಳ್ಳುವ ಮೂಲಕ ತಮ್ಮ ಪ್ರಥಮ ದಿನವನ್ನು ರಾಮಚಂದ್ರ ಆರಂಭಿಸಿದರು. ಸೌಂದರ್ಯಕ್ಕೆ ಹೆಸರಾದ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವುದು ತಮಗೆ ಖುಷಿ ತಂದಿದೆ ಎಂದ ರಾಮಚಂದ್ರ, ಇಲ್ಲಿನ ಯೋಧರಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ ಮತ್ತು ಜನರಲ್ ತಿಮ್ಮಯ್ಯ ಅವರ ಅಭಿಮಾನಿ ತಾವೆಂದು ಹೇಳಿದರು.
ಕರ್ನಾಟಕಕ್ಕೆ ಅತೀ ಹೆಚ್ಚು ಆದಾಯ ತರುವ ನಾಡು ಎಂದೇ ಪ್ರಸಿದ್ಧವಾದ ಕೊಡಗಿನಲ್ಲಿ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿಲ್ಲ ಎನ್ನುವ ದೂರಿದೆ. ಕೊಡಗನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂಬ ಚಳುವಳಿಯೂ ಆಗೊಮ್ಮೆ ಈಗೊಮ್ಮೆ ಬಿರುಸಾಗುತ್ತಿದೆ. ಇವುಗಳನ್ನು ನಿಭಾಯಿಸಿಕೊಂಡು ಕೆಲಸ ಮಾಡುವ ಜವಾಬ್ದಾರಿ ರಾಮಚಂದ್ರ ಅವರ ಮೇಲಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications