ಬೆಂಗಳೂರು ಆಸ್ಪತ್ರೆಯಲ್ಲಿ ಉಚಿತ ಸೀಳ್ದುಟಿ ಸುರೂಪ ಶಸ್ತ್ರಚಿಕಿತ್ಸೆ
ಬೆಂಗಳೂರು : ಸೀಳು ತುಟಿ ಹೊಂದಿರುವ ಕಡು ಬಡವರಿಗೆ ಸುರೂಪ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಲು ‘ಬೆಂಗಳೂರು ಆಸ್ಪತ್ರೆ ಸೀಳು ತುಟಿ ಚಿಕಿತ್ಸಾ ಟ್ರಸ್ಟ್ ಮುಂದಾಗಿದೆ’.
ಸೀಳು ತುಟಿ ಸರಿಪಡಿಸುವ ಸುರೂಪ ಶಸ್ತ್ರಚಿಕಿತ್ಸೆಗೆ ಕನಿಷ್ಠ 12 ಸಾವಿರ ರುಪಾಯಿ ಖರ್ಚಾಗಲಿದ್ದು , ಈ ಮೊತ್ತವನ್ನು ಭರಿಸಲು ಸಾಧ್ಯವಾಗದಿರುವ ಬಡವರಿಗೆ ನೆರವಾಗುವ ದೃಷ್ಟಿಯಿಂದ , ಉಚಿತ ಶಸ್ತ್ರ ಚಿಕಿತ್ಸಾ ಯೋಜನೆಯನ್ನು ಟ್ರಸ್ಟ್ ಹಮ್ಮಿಕೊಂಡಿದೆ. ಈ ಯೋಜನೆಯಡಿ 200 ಶಸ್ತ್ರ ಚಿಕಿತ್ಸೆಗಳನ್ನು ಮಾಡಲಾಗುವುದು ಎಂದು ಬೆಂಗಳೂರು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಕೆ.ಎಸ್.ಶೇಖರ್ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ಸೀಳು ತುಟಿ ಒಂದು ಸಾಮಾನ್ಯ ಅಂಗವಿಕಲಕತೆ. ಅತ್ಯಾಧುನಿಕ ವೈದ್ಯಕೀಯ ಸೌಲಭ್ಯ ಹಾಗೂ ಶಸ್ತ್ರಚಿಕಿತ್ಸೆಯಿಂದ ಈ ಅಂಗ ವಿಕಲತೆಯನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಶೇಖರ್ ಹೇಳಿದರು. ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವವರಿಗೆ ವಯೋಮಾನದ ಮಿತಿಯಿಲ್ಲ .
ಆಸಕ್ತರು ಸಾರ್ವಜನಿಕ ಸಂಪರ್ಕಾಧಿಕಾರಿ, ಸೀಳು ತುಟಿ ನಿರ್ವಹಣಾ ವಿಭಾಗ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗ, ಬೆಂಗಳೂರು ಆಸ್ಪತ್ರೆ, ರಾಷ್ಟ್ರೀಯ ವಿದ್ಯಾಲಯ ರಸ್ತೆ , ಬೆಂಗಳೂರು- 560 004 ಈ ವಿಳಾಸವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 080- 6562753 ಅಥವಾ 6565494 ಸಂಪರ್ಕಿಸಿ ವಿವರಗಳನ್ನು ಪಡೆಯಬಹುದು.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications