ನೆಲಮಂಗಲದಲ್ಲಿ ದರೋಡೆ : 7 ಮಂದಿಗೆ ಗಾಯ,ಲಕ್ಷ ರು.ಲೂಟಿ
ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಯ ನೆಲಮಂಗಲ ಹೊರ ವಲಯದಲ್ಲಿನ 2 ಮನೆಗಳ ಮೇಲೆ ಮಂಗಳವಾರ ಮುಂಜಾವಿನಲ್ಲಿ ದಾಳಿ ನಡೆಸಿರುವ ದರೋಡೆಕೋರರ ತಂಡ, ಏಳು ಜನರನ್ನು ಗಾಯಗೊಳಿಸಿದೆ ಹಾಗೂ 1 ಲಕ್ಷ ರುಪಾಯಿಗೂ ಹೆಚ್ಚು ಮೌಲ್ಯದ ನಗ ನಾಣ್ಯಗಳನ್ನು ದೋಚಿ ಪರಾರಿಯಾಗಿದೆ.
ಹುಚ್ಚ ಹನುಮೇಗೌಡ ಎಂಬವರ ಮನಗೆ ನುಗ್ಗಿದ ದರೋಡೆಕೋರರು, ಪ್ರತಿಭಟಿಸಿದ ಹನುಮೇಗೌಡ, ಅವರ ಪತ್ನಿ ಲಲಿತಾ ಹಾಗೂ ಅವರ ಮಗನ ಮೇಲೆ ಹಲ್ಲೆ ಮಾಡಿ 35 ಸಾವಿರ ರುಪಾಯಿ ನಗದು ಹಾಗೂ ಅಂದಾಜು 50 ಸಾವಿರ ರುಪಾಯಿ ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ. ಆನಂತರ ಮತ್ತೊಂದು ಮನೆಗೆ ನುಗ್ಗಿದ ದರೋಡೆಕೋರರ ತಂಡ ಲಕ್ಷ್ಮೀಬಾಯಿ ಎನ್ನುವ ಮನೆಯಾಡತಿ ಅವರ ಮಕ್ಕಳು ಹಾಗೂ ಮನೆ ಕೆಲಸದಾಕೆಯನ್ನು ಗಾಯಗೊಳಿಸಿ 50 ಸಾವಿರ ರುಪಾಯಿ ನಗದು ದೋಚಿದ್ದಾರೆ.
ಗಾಯಗೊಂಡ 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದರೋಡೆಕೋರರ ತಂಡದಲ್ಲಿ ಎಂಟು ಮಂದಿ ಇದ್ದು, ಅವರೆಲ್ಲರೂ ಮುಖವಾಡ ಧರಿಸಿದ್ದರು. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
(ಇನ್ಫೋ ವಾರ್ತೆ)
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications