ಹೆಸರು ಸೂಚಿಸಿ, ಉಚಿತವಾಗಿ ತಿಮ್ಮಪ್ಪನ ದರ್ಶನ ಭಾಗ್ಯ ಗಿಟ್ಟಿಸಿ
ಬೆಂಗಳೂರು : ಇದನ್ನು ಸ್ಪರ್ಧೆ ಎಂದಾದರೂ ಅಂದುಕೊಳ್ಳಿ, ಅಥವಾ ನಿಮ್ಮ ಕಲ್ಪನಾ ವಿಲಾಸ ಗರಿಗೆದರಲು ಪಂಥಾಹ್ವಾನ ಅಂತಲಾದರೂ ಅಂದುಕೊಳ್ಳಿ. ಒಟ್ಟಿನಲ್ಲಿ ಪ್ರವಾಸೋದ್ಯಮ ಸಚಿವ ಆರ್.ರೋಷನ್ಬೇಗ್ ಅವರ ಕನಸಿನ ಕೂಸಿಗೊಂದು ಕುಲಾವಿ ಬೇಕಿದೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ರಾಜ್ಯದಿಂದ ತೆರಳುವ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಸುಸಜ್ಜಿತ ಭವನವೊಂದನ್ನು ನಿರ್ಮಿಸುತ್ತಿದೆ. ನಾಲ್ಕು ಎಕರೆ ಪ್ರದೇಶದಲ್ಲಿ ಎದ್ದು ನಿಲ್ಲಲಿರುವ ಈ ಭವನಕ್ಕೊಂದು ಹೆಸರು ಬೇಕಾಗಿದೆ. ಮುದ್ದಾಗಿರಬೇಕು, ಚಿಕ್ಕದಾಗಿ- ಚೊಕ್ಕವಾಗಿ, ಅರ್ಥಪೂರ್ಣವಾಗಿರಬೇಕು.
ಸಚಿವರು ಮೆಚ್ಚುವ ಸೂಕ್ತ ಹೆಸರನ್ನು ಸೂಚಿಸಿದಲ್ಲಿ - ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಮಗೆ ತಿರುಮಲಕ್ಕೆ ಉಚಿತ ಯೋಜಿತ ಪ್ರವಾಸದ ವ್ಯವಸ್ಥೆ ಮಾಡಲಿದೆ ಎಂದು ರೋಷನ್ಬೇಗ್ ತಿಳಿಸಿದ್ದಾರೆ. ಹೆಸರು ಹೊಳೆದಲ್ಲಿ ಜೂನ್ 27 ರೊಳಗೆ ರೋಷನ್ಬೇಗ್ ಅವರಿಗೆ ಪತ್ರದ ಮೂಲಕ ತಿಳಿಸಬಹುದು. ವಿಳಾಸ- ಆರ್. ರೋಷನ್ ಬೇಗ್, ಪ್ರವಾಸೋದ್ಯಮ ಹಾಗೂ ಹಜ್ ಸಚಿವರು, ಕರ್ನಾಟಕ ಸರ್ಕಾರ ಕೊಠಡಿ ಸಂಖ್ಯೆ 366 ಎ, 3 ನೇ ಮಹಡಿ, ವಿಧಾನಸೌಧ, ಬೆಂಗಳೂರು-1.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications